ಬೆಂಗಳೂರು: ನಗರದಿಂದ ಅಬುದಾಬಿಗೆ ಹೊರಟಿದ್ದ ಎತಿಹಾದ್ ಏರ್ ಲೈನ್ಸ್ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಘಟನೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭಾನುವಾರ ರಾತ್ರಿ ನಡೆದಿದೆ. ಸುದೈವವಶಾತ್ ವಿಮಾನ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದ್ದು, ಸುಮಾರು 200 ಪ್ರಯಾಣಿಕರು ಭಾರೀ ಅನಾಹುತದಿಂದ ಪಾರಾಗಿದ್ದಾರೆ.
ಬೆಂಗಳೂರಿನಿಂದ ದುಬೈಗೆ ತೆರಳುತ್ತಿದ್ದ ಇವೈ 237 ವಿಮಾನದಲ್ಲಿ ನಿನ್ನೆ ಸಂಜೆ ಹಠಾತ್ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಟೇಕ್ ಆಫ್ ಆಗುತ್ತಿದ್ದಂತೆಯೇ ತಾಂತ್ರಿಕದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಪೈಲೆಟ್ ನಂದಿಬೆಟ್ಟದ ಬಳಿ ತೀವ್ರ ತಿರುವು ತೆಗೆದುಕೊಂಡು ವಾಪಸ್ ವಿಮಾನ ನಿಲ್ದಾಣಕ್ಕೆ ಹೊರಟು ತುರ್ತು ಭೂಸ್ಪರ್ಶ ಮಾಡಿದ್ದಾನೆ. ತಾಂತ್ರಿಕ ದೋಷವನ್ನು ಸರಿಪಡಿಸಿದ ಬಳಿಕ ವಿಮಾನ ಸುಮಾರು ನಾಲ್ಕು ತಾಸು ತಡವಾಗಿ ಪ್ರಯಾಣ ಬೆಳೆಸಿತು.