Saturday, March 15, 2025
Homeಟಾಪ್ ನ್ಯೂಸ್BIG NEWS : ವಿಕಲಚೇತನರಿಗೆ ರೂ.1 ಲಕ್ಷ ಸಹಾಯಧನ, 3 ಯೋಜನೆ ಜಾರಿ- ಸಚಿವೆ ಹೆಬ್ಬಾಳ್ಕರ್‌

BIG NEWS : ವಿಕಲಚೇತನರಿಗೆ ರೂ.1 ಲಕ್ಷ ಸಹಾಯಧನ, 3 ಯೋಜನೆ ಜಾರಿ- ಸಚಿವೆ ಹೆಬ್ಬಾಳ್ಕರ್‌

ಬೆಂಗಳೂರು : ರಾಜ್ಯ ಸರ್ಕಾರದಿಂದ ವಿಕಲಚೇತನರಿಗಾಗಿ ರೂ.1 ಲಕ್ಷದವರೆಗೆ ಶಸ್ತ್ರಚಿಕಿತ್ಸೆ ಮಾಡಿಸಿಕೊಳ್ಳಲು ಸಹಾಯಧನ ಮಂಜೂರು ಮಾಡಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಮಾಹಿತಿ ನೀಡಿದರು.

ವಿಧಾನ ಮಂಡಲದ‌ ಅಧಿವೇಶನದ‌ ಕಲಾಪದಲ್ಲಿ ಇಂದು ಪರಿಷತ್ ಸದಸ್ಯ ವೈ.ಎಂ.ಸತೀಶ್ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ವಿಕಲಚೇತನರಿಗಾಗಿ ಪ್ರಮುಖ 3 ಯೋಜನೆಗಳನ್ನೂ ಜಾರಿಗೆ ತರಲಾಗಿದೆ ಎಂದು ವಿವರಿಸಿದರು.

ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆಯಡಿ ಶಸ್ತ್ರಚಿಕಿತ್ಸೆಯ ಮುಖಾಂತರ ವಿಕಲಚೇತನತೆ ನಿವಾರಣೆಗೆ ಅಥವಾ ಕಡಿಮೆ ಮಾಡಿಕೊಳ್ಳಲು, ಸರ್ಕಾರಿ ಇಲ್ಲವೇ ಕರ್ನಾಟಕದ ಸುಸಜ್ಜಿತ ಖಾಸಗಿ ಆಸ್ಪತ್ರೆಗಳಲ್ಲಿ ಶಸ್ತ್ರಚಿಕಿತ್ಸೆಗೆ ಸಹಾಯಧನ ನೀಡಲಾಗುವುದು ಎಂದು ಘೋಷಿಸಿದರು.

ಕಾಕ್ಲಿಯಾರ್ ಇಂಪ್ಲಾಂಟ್ ಯೋಜನೆ ಅಡಿಯಲ್ಲಿ ಕಡ್ಡಾಯ ನವಜಾತ ಶಿಶುಗಳ ಶ್ರವಣ ತಪಾಸಣೆ ನಡೆಸಿ, ಗುರುತು ಹಚ್ಚಿದ ತೀವ್ರತರವಾದ/ಗಂಭೀರ ಸ್ವರೂಪದ ಶ್ರವಣದೋಷವುಳ್ಳ 6 ವರ್ಷದ ಕೆಳಗಿನ ಮಕ್ಕಳಿಗೆ ಶ್ರವಣ ಸಾಧನಗಳನ್ನ ನೀಡಲಾಗುವುದು ಎಂದು ತಿಳಿಸಿದರು.

ರಾಜ್ಯದಲ್ಲಿನ ವಿಕಲಚೇತನರಿಗೆ ಅಂಗವಿಕಲತೆ ನಿವಾರಣಾ ವೈದ್ಯಕೀಯ ಪರಿಹಾರ ನಿಧಿ ಯೋಜನೆ, ನಿರಾಮಯ ಆರೋಗ್ಯ ವಿಮಾ ಯೋಜನೆ, ಕಾಕ್ಲಿಯರ್ ಇಂಪ್ಲಾಂಟ್ ಯೋಜನೆಗಳು ಜಾರಿಯಲ್ಲಿವೆ ಎಂದು ಸದನಕ್ಕೆ ತಿಳಿಸಿದರು.

ಹೆಚ್ಚಿನ ಸುದ್ದಿ

error: Content is protected !!