ಬೆಂಗಳೂರು : SSLC ಹಾಗೂ PUC ಸ್ಟೂಡೆಂಟ್ಸ್ ಗೆ KSRTC ಸಾರಿಗೆ ಸಂಸ್ಥೆ ಗುಡ್ ನ್ಯೂಸ್ ಕೊಟ್ಟಿದೆ. ಪ್ರಸಕ್ತ ಸಾಲಿನ ಪರೀಕ್ಷೆಗೆ ತೆರಳುವ ವೇಳೆ ಉಚಿತ ಪ್ರಯಾಣಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.
ಈ ಸಂಬಂಧ ಅಧಿಕೃತ ಪ್ರಕಟಣೆ ಹೊರಡಿಸಲಾಗಿದ್ದು, ವಿದ್ಯಾರ್ಥಿಗಳು ಉಚಿತ ಪ್ರಯಾಣ ಮಾಡಬಹುದು ಎಂದು ಉಲ್ಲೇಖಿಸಲಾಗಿದೆ. ಪ್ರಸಕ್ತ ವರ್ಷದಲ್ಲಿ ದಿ:01.03.2025 ರಿಂದ ಕ ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಹಾಗೂ 21.03.2025 ರಿಂದ ಎಸ್ಎಸ್ಎಲ್ಸಿ ವಿದ್ಯಾರ್ಥಿಗಳಿಗೆ ವಾರ್ಷಿಕ ಪರೀಕ್ಷೆಗಳು ಪ್ರಾರಂಭವಾಗಲಿವೆ.
ಪರೀಕ್ಷಾ ಸಂದರ್ಭದಲ್ಲಿ ವಿದ್ಯಾರ್ಥಿಗಳಿಗೆ ಅವರ ವಿದ್ಯಾಸಂಸ್ಥೆಯ ಹೊರತುಪಡಿಸಿ ಉಳಿದೆಡೆ ಎಕ್ಸಾಂ ಸೆಂಟರ್ ನಿಯೋಜನೆಗೊಂಡಿರುತ್ತದೆ. ಹೀಗಾಗಿ ವಾಸಸ್ಥಳದಿಂದ ಪರೀಕ್ಷಾ ಸ್ಥಳಕ್ಕೆ ತೆರಳಲು ಕೆಎಸ್ ಆರ್ಟಿಸಿ ಅನುಮತಿ ನೀಡಿದೆ.
KSRTC ಯ ಎಲ್ಲಾ ಘಟಕ ಮತ್ತು ಬಸ್ ನಿಲ್ದಾಣಗಳ ಸೂಚನಾ ಫಲಕಗಳಲ್ಲಿ ಈ ಮಾಹಿತಿಯನ್ನು ಪ್ರದರ್ಶಿಸಿ ಕ್ರಮಗಳನ್ನು ಜಾರಿಗೊಳಿಸಲು ಕ್ರಮವಹಿಸುವಂತೆ ಸೂಚಿಸಲಾಗಿದೆ.