ಬೆಂಗಳೂರು: ಮಾಜಿ ಸಚಿವ ನಾಗೇಂದ್ರ ಅವರನ್ನು ಸಚಿವ ಸಂಪುಟಕ್ಕೆ ತೆಗೆದುಕೊಳ್ಳುವ ಸಾಧ್ಯತೆಯಿದೆ ಎಂದು ಗೃಹ ಸಚಿವ ಜಿ. ಪರಮೇಶ್ವರ್ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಗೇಂದ್ರ ಅವರು ವಾಲ್ಮೀಕಿ ಹಗರಣದಲ್ಲಿ ಯಾವುದೇ ರೀತಿ ಭಾಗಿಯಾಗಿಲ್ಲ ಎಂದು ಹೊರಗಡೆ ಬಂದಿದ್ದಾರೆ. ಅವರನ್ನು ಸಚಿವ ಸ್ಥಾನಕ್ಕೆ ತೆಗೆದುಕೊಳ್ಳುವುದರ ಬಗ್ಗೆ ಯೋಚನೆ ಮಾಡುತ್ತೇವೆ. ಈ ಹಿಂದೆ ಜಾರ್ಜ್ ಅವರನ್ನು ತೆಗೆದುಕೊಂಡಿದ್ದೇವೆ ಎಂದು ಹೇಳಿದರು.
ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಮೇಲ್ಮನವಿ ಸಲ್ಲಿಸಲು ಮನವಿ ಬಂದಿದೆ. ಈ ವಿಷಯವಾಗಿ ನಿರ್ಧಾರ ತೆಗೆದುಕೊಳ್ಳಲು ಇಲಾಖೆಗೆ ಸೂಚನೆ ನೀಡಿದ್ದೇವೆ. ದರ್ಶನ್ ಪ್ರಕರಣಕ್ಕೆ ಸಂಬಂಧಿಸಿ ಮೇಲ್ಮನವಿ ಸಲ್ಲಿಸಲು ಇಲಾಖೆ ನಿರ್ಧಾರ ಕೈಗೊಳ್ಳುತ್ತದೆ ಎಂದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಮುಖ್ಯಮಂತ್ರಿ ಹಾಗೂ ಹೈಕಮಾಂಡ್‌ಗೆ ಬಿಟ್ಟ ವಿಚಾರವಾಗಿದೆ ಎಂದರು.