Wednesday, February 19, 2025
Homeಟಾಪ್ ನ್ಯೂಸ್‌ಸುದೀಪ್‌ ನಿಮ್ಮನ್ನು, ನಿಮ್ಮ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ: ಪ್ರಕಾಶ್‌ ರಾಜ್

‌ಸುದೀಪ್‌ ನಿಮ್ಮನ್ನು, ನಿಮ್ಮ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ: ಪ್ರಕಾಶ್‌ ರಾಜ್

ನಟ ಸುದೀಪ್‌ ಬಿಜೆಪಿ ಪರ ಪ್ರಚಾರ ಮಾಡುವುದಕ್ಕೆ ಆಘಾತ ಹಾಗೂ ನೋವು ವ್ಯಕ್ತಪಡಿಸಿದ್ದ ಪ್ರಕಾಶ್‌ ರಾಜ್‌ ಅವರು ಸುದೀಪ್‌ ಬಳಿ ಜನರ ಪ್ರಶ್ನೆಗಳಿಗೆ, ಟೀಕೆಗಳಿಗೆ ತಯಾರಾಗಿರಿ ಎಂದು ಪ್ರಕಾಶ್ ರಾಜ್ ಹೇಳಿದ್ದಾರೆ.

“ಸುದೀಪ್.. ಒಬ್ಬ ಮೇರು ಕಲಾವಿದನಾಗಿ ಸಮಾಜದ ಎಲ್ಲ ವರ್ಗದ ಪ್ರೀತಿಯಿಂದ ಬೆಳೆದ ನೀವು ,ಜನ ಸಾಮಾನ್ಯನ ದನಿಯಾಗುವಿರಿ ಎಂದು ಆಶಿಸಿದ್ದೆ. ಆದರೆ ತಾವು ಒಂದು ರಾಜಕೀಯ ಪಕ್ಷದ ಬಣ್ಣ ಬಳಿದುಕೊಳ್ಳುತ್ತೀರಿ ಎಂದು ನಿರೀಕ್ಷಿಸಿರಲ್ಲ. ಇನ್ನು ಮುಂದೆ ನಿಮ್ಮನ್ನೂ .. ನಿಮ್ಮ ಪಕ್ಷವನ್ನು ಪ್ರಶ್ನಿಸುವ ಜನ ದನಿಗೆ ತಯಾರಾಗಿರಿ.” ಎಂದು ಪ್ರಕಾಶ್‌ ರಾಜ್‌ ಟ್ವೀಟ್‌ ಮಾಡಿದ್ದಾರೆ.

ಅದಕ್ಕೂ ಮುನ್ನ, ಸುದೀಪ್‌ ಬಿಜೆಪಿ ಸೇರುವುದಿಲ್ಲ ಎಂದು ಪ್ರಕಾಶ್‌ ರಾಜ್‌ ಟ್ವೀಟ್‌ ಮಾಡಿದ್ದರು. ನಮ್ಮ ಸುದೀಪ್‌ ತಮ್ಮನ್ನು ಮಾರುವವರಲ್ಲ, ಇದು ನಕಲಿ ಸುದ್ದಿ ಎಂದು ಸುದೀಪ್‌ ಬಿಜೆಪಿ ಸೇರುವ ಸುದ್ದಿಯ ಬಗ್ಗೆ ಪ್ರಕಾಶ್‌ ರಾಜ್‌ ಪ್ರತಿಕ್ರಿಯಿಸಿದ್ದರು.

ಅದರ ಬಳಿಕ, ಸ್ವತಃ ಸುದೀಪ್‌ ಅವರೇ ಬಿಜೆಪಿ ಪರ ಪ್ರಚಾರ ಮಾಡುವುದಾಗಿ ಹೇಳಿದ ಮೇಲೆ, ಪ್ರಕಾಶ್‌ ರಾಜ್‌ ಆಘಾತ ವ್ಯಕ್ತಪಡಿಸಿದ್ದರು.

ಹೆಚ್ಚಿನ ಸುದ್ದಿ

error: Content is protected !!