ಮತದಾರರರಿಗೆ ಆಮಿಷ ಒಡ್ಡಿದ ಆರೋಪದ ಮೇಲೆ ಬೆಂಗಳೂರಿನ ರಾಜರಾಜೇಶ್ವರಿನಗರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.
ಕುಸುಮಾ ಮಾತ್ರವಲ್ಲದೆ, ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಸಂಸದ ಡಿಕೆ ಸುರೇಶ್ ಹಾಗೂ ಜಗದೀಶ್ ಎಂಬುವವರ ಮೇಲೆಯೂ ಎಫ್ಐಆರ್ ದಾಖಲಿಸಲಾಗಿದೆ.
ಮತದಾರರಿಗೆ ತವಾ ಹಂಚಿಕೆ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಚುನಾವಣಾ ಅಧಿಕಾರಿಗಳು ದಾಳಿ ನಡೆಸಿದ್ದರು. ಈ ವೇಳೆ ತವಾ ಹಂಚುತ್ತಿದ್ದವರು ಪರಾರಿಯಾಗಿದ್ದಾರೆ. ಪರಿಶೀಲನೆ ವೇಳೆ ತವಾ ಬಾಕ್ಸಿನಲ್ಲಿ ಕುಸುಮಾ ಹಾಗೂ ಡಿ.ಕೆ.ಸುರೇಶ್ ಭಾವ ಚಿತ್ರ ಇರುವುದು ಪತ್ತೆಯಾಗಿದೆ. ಸ್ಥಳದಲ್ಲಿದ್ದ ಓರ್ವನನ್ನು ವಶಕ್ಕೆ ಪಡೆದು ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ. ಚುನಾವಣಾ ಅಧಿಕಾರಿಗಳಿಂದ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಗೆ ದೂರು ನೀಡಲಾಗಿದ್ದು, ಚುನಾವಣಾ ಅಧಿಕಾರಿಗಳ ದೂರು ಆಧರಿಸಿ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ.