ಬೆಂಗಳೂರು : ದುಬೈನಿಂದ ದೇಶಕ್ಕೆ ಅಕ್ರಮವಾಗಿ ಚಿನ್ನ ಸಾಗಿಸುತ್ತಿದ್ದ ಪ್ರಕರಣದಲ್ಲಿ ಎ2 ಆರೋಪಿ ತರುಣ್ ರಾಜುಗೆ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ. ಶುಕ್ರವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಮೂರ್ತಿ ವಿಶ್ವನಾಥ್ ಸಿ.ಗೌಡರ್ ಈ ಆದೇಶ ಹೊರಡಿಸಿದ್ದಾರೆ.
ಪ್ರಕರಣದಲ್ಲಿ ರನ್ಯಾ ಮಲತಂದೆ ರಾಮಚಂದ್ರ ರಾವ್ ಅವರ ಪಾತ್ರವೂ ಇರುವುದು ಸ್ಪಷ್ಟವಾಗಿದ್ದು ಈಗ ಅವರ ವಿರುದ್ದವೂ ತನಿಖೆಗೆ ಆದೇಶಿಸಲಾಗಿದೆ. ಜೊತೆಗೆ, ರಾಮಚಂದ್ರ ರಾವ್ ಆದೇಶದಂತೆ ರನ್ಯಾಗೆ ಪ್ರೋಟೋಕಾಲ್ ನೀಡಲು ವಿಮಾನನಿಲ್ದಾಣಕ್ಕೆ ತೆರಳುತ್ತಿದ್ದ ಬಸವರಾಜ್ ಅವರಿಗೆ ಕಡ್ಡಾಯ ರಜೆ ನೀಡಲಾಗಿದೆ.
ಇಂದು ಮಧ್ಯಾಹ್ನ ನ್ಯಾಯಾಲಯ ರನ್ಯಾ ರಾವ್ ಸಲ್ಲಿಸಿರುವ ಜಾಮೀನು ಅರ್ಜಿಯ ವಿಚಾರಣೆ ನಡೆಸಲಿದೆ.