ಸರ್ಕಾರ ಮದ್ಯದ ದರ ಎಷ್ಟೇ ಹೆಚ್ಚಳ ಮಾಡಿದ್ರೂ, ಮದ್ಯಪಾನ ಮಾಡುವವರ ಸಂಖ್ಯೆ ಕಮ್ಮಿಯಾಗಿಲ್ಲ. ಈ ಮಧ್ಯೆ ಮದ್ಯಪ್ರಿಯರಿಗೆ ಸರ್ಕಾರ ಶಾಕ್ ಕೊಟ್ಟಿದೆ. ಪ್ರತೀ ಮದ್ಯದ ಮೇಲೆ 10 ರೂಪಾಯಿ ತೆರಿಗೆ ವಿಧಿಸುವ ನಿರ್ಧಾರವನ್ನು ಹಿಮಾಚಲ ಪ್ರದೇಶ ಸರ್ಕಾರ ತೆಗೆದುಕೊಂಡಿದೆ.
ಇನ್ನು ಪ್ರತೀ ಬಾಟಲ್ ಮದ್ಯದ ಮೇಲೆ ವಿಧಿಸುವ 10 ರೂಪಾಯಿ ತೆರಿಗೆಗೆ ಗೋ ತೆರಿಗೆ ಎಂದು ಹೆಸರಿಡಲಾಗಿದ್ದು, ಹಣಕಾಸು ಸಚಿವರೂ ಆಗಿರುವ ಮುಖ್ಯಮಂತ್ರಿ ಸುಖವಿಂದರ್ ಸಿಂಗ್ ಸುಖು ರಾಜ್ಯ ಬಜೆಟ್ ಮಂಡನೆ ವೇಳೆ ಘೋಷಣೆ ಮಾಡಿದ್ದಾರೆ.
ರಾಜ್ಯದ ಆರ್ಥಿಕ ಚಟುವಟಿಕೆಯಲ್ಲಿ ಜಾನುವಾರುಗಳ ಪಾತ್ರ ಮಹತ್ವದ್ದಾಗಿದೆ. ಹೀಗಾಗಿ ಹಸು ಸಾಕಾಣಿಕೆಯನ್ನು ಉತ್ತೇಜಿಸುವ ದೃಷ್ಟಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದ್ದು, ಮದ್ಯದ ಮೇಲೆ ‘ಗೋ ತೆರಿಗೆ’ ವಿಧಿಸುವುದರಿಂದ ವಾರ್ಷಿಕ ನೂರು ಕೋಟಿ ರೂಪಾಯಿ ಆದಾಯ ಸಂಗ್ರಹಿಸುವ ಗುರಿಯನ್ನು ಸಿಎಂ ಸುಖವಿಂದರ್ ಸಿಂಗ್ ಸುಖು ನೇತೃತ್ವದ ಹಿಮಾಚಲ ಪ್ರದೇಶ ಸರ್ಕಾರ ಹೊಂದಿದೆ ಎಂದು ಹೇಳಲಾಗಿದೆ.