ಬ್ಯಾಟರಾಯನಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿರುವ ಮುನೇಂದ್ರ ಕುಮಾರ್ ಅವರ ಒಡೆತನದ ಗೋದಾಮಿನ ಮೇಲೆ ದಾಳಿ ನಡೆಸಿರುವ ಜಿಎಸ್‍ಟಿ ಅಧಿಕಾರಿಗಳು ಸುಮಾರು ಮೂರು ಕೋಟಿ ರೂ. ಮೌಲ್ಯದ ಕುಕ್ಕರ್, ಪಾತ್ರೆಸಾಮಾನುಗಳು ಮತ್ತಿತರ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ಈ ಸಾಮಗ್ರಿಗಳನ್ನು ಮತದಾರರಿಗೆ ಹಂಚಲು ಸಂಗ್ರಹಿಸಿಡಲಾಗಿದೆ ಎನ್ನಲಾಗಿದ್ದು ಈ ಬಗ್ಗೆ ದಾಖಲೆಗಳನ್ನು ಪರಿಶೀಲಿಸಲಾಗುತ್ತಿದೆ. ಈ ಗೋದಾಮಿನಲ್ಲಿ ಮತದಾರರಿಗೆ ಆಮಿಷವೊಡ್ಡಲು ಉಡುಗೊರೆಯ ವಸ್ತುಗಳನ್ನು ಸಂಗ್ರಹಿಸಿಡಲಾಗುತ್ತಿದೆ ಎಂಬ ಖಚಿತ ಮಾಹಿತಿಯ ಮೇರೆಗೆ ಜಿಎಸ್‍ಟಿ ಅಧಿಕಾರಿಗಳು ಭಾನುವಾರ ಮುಂಜಾನೆ ದಾಳಿ ನಡೆಸಿದ್ದಾರೆ.