ಬೆಂಗಳೂರು: ಬಿಜೆಪಿಯ ವಿಧಾನ ಪರಿಷತ್ ಸದಸ್ಯ ಹೆಚ್ ವಿಶ್ವನಾಥ್ ಅವರು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.
ಕೆಪಿಸಿಸಿ ಕಚೇರಿಯಲ್ಲಿ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೆಚ್ ವಿಶ್ವನಾಥ್ ಅವರು ಜೆಡಿಎಸ್ ಬಿಟ್ಟು, ಬಿಜೆಪಿ ಸೇರ್ಪಡೆಗೊಂಡಿದ್ದರು. ಇದೀಗ ಕಾಂಗ್ರೆಸ್‌ಗೆ ಏಪ್ರಿಲ್ 10ರಂದು ಸೇರ್ಪಡೆಯಾಗುತ್ತಿದ್ದಾರೆ ಎಂದು ಹೇಳಿದರು.
ಏಪ್ರಿಲ್ 10ರ ಸೋಮವಾರ ಮಧ್ಯಾಹ್ನ ಅವರು ಕಾಂಗ್ರೆಸ್‌ಗೆ ಸೇರ್ಪಡೆಯಾಗುತ್ತಿದ್ದು, ಅವರ ಜ್ಞಾನ ಭಂಡಾರದ ಬಗ್ಗೆ ನಾವು ಮಾತನಾಡಬೇಕಾಗಿಲ್ಲ ಎಂದು ಹೇಳಿದರು.
ಟಿಕೆಟ್ ತಪ್ಪಿದವರು ತಾಳ್ಮೆಯಿಂದಿರಬೇಕು. ಹೊಸಬರಿಗೆ ಟಿಕೆ ಕೊಡುವ ಸಲುವಾಗಿ ಕೆಲವು ಬದಲಾವಣೆಗಳನ್ನು ಮಾಡಿದ್ದೇವೆಯೇ ಹೊರತು, ನಿರಾಕರಿಸಲು ಅಲ್ಲ ಎಂದು ಹೇಳಿದರು.