Sunday, July 7, 2024
HomeಬೆಂಗಳೂರುHAMSLEKHA : ದರ್ಶನ್ ಪರ ಮಾತನಾಡಿದ ನಾದಬ್ರಹ್ಮ!

HAMSLEKHA : ದರ್ಶನ್ ಪರ ಮಾತನಾಡಿದ ನಾದಬ್ರಹ್ಮ!

ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್‌ ಪರ ಹಂಸಲೇಖ ಮಾತನಾಡಿದ್ದಾರೆ.

ಅವರು‌ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿ,ʻʻನಾವು ಸಿಟ್ಟನ್ನು ಸ್ಕ್ರಿಪ್ಟ್ ಮಾಡಬೇಕು. ದ್ವೇಷವನ್ನು ಕ್ಯಾರೆಕ್ಟರ್ ಮಾಡಬೇಕು. ಸಿಟ್ಟು ಅಂದರೆ ಅದೊಂದು ಸ್ಕ್ರಿಪ್ಟ್‌.

ದ್ವೇಷ ಅಂದರೆ ಅದು ಕ್ಯಾರೆಕ್ಟರ್ . ನಿಜ ಜೀವನದಲ್ಲಿ ಸ್ಕ್ರಿಪ್ಟ್ ತರಬಾರದು. ನಿಜ ಜೀವನದಲ್ಲಿ ಕ್ಯಾರೆಕ್ಟರ್ ಅನ್ನು ತರಬಾರದು. ಇದು ಕಲಾವಿದರ ಕರ್ತವ್ಯ.” ಎಂದರು.

ದರ್ಶನ್ ನನ್ನ ಮಗು ತರಾ ಎಂದು ತಿಳಿದುಕೊಳ್ಳಿ. ನನ್ನ ಮಗು ತಪ್ಪು ಮಾಡಿದ್ದರೆ, ತಂದೆ ಎಷ್ಟು ನೋವು ತಿಂತಾನೋ ಅಷ್ಟೇ ನಾನು ನೋವು ತಿನ್ನುತ್ತೀನಿ. ಆ ಮಗು ಕೂಡ ಅಷ್ಟೇ ನೋವು ತಿನ್ನುತ್ತಿರುತ್ತೆ. ನಾವು ಆತ ಕೊಟ್ಟಿರುವ ಕೊಡುಗೆ ಕಡೆ ನೋಡೋಣ ಎಂದು ಹೇಳಿದ್ದಾರೆ.

ಹೆಚ್ಚಿನ ಸುದ್ದಿ