Sunday, July 7, 2024
Homeಟಾಪ್ ನ್ಯೂಸ್Hathras Stampede: ಹತ್ರಾಸ್‌ ಕಾಲ್ತುಳಿತ; ರಷ್ಯಾ ಅಧ್ಯಕ್ಷ ಸಂತಾಪ

Hathras Stampede: ಹತ್ರಾಸ್‌ ಕಾಲ್ತುಳಿತ; ರಷ್ಯಾ ಅಧ್ಯಕ್ಷ ಸಂತಾಪ

ನವದೆಹಲಿ: ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ನಡೆದ ಕಾಲ್ತುಳಿತದಲ್ಲಿ ಬರೋಬ್ಬರಿ 121 ಜನರು ಮೃತಪಟ್ಟಿದ್ದಾರೆ. ಈ ದುರಂತ ಘಟನೆಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಸಂತಾಪ ಸೂಚಿಸಿದ್ದಾರೆ.

ಉತ್ತರ ಪ್ರದೇಶದಲ್ಲಿ ಸಂಭವಿಸಿದ ಕಾಲ್ತುಳಿತ ದುರಂತದ ಬಗ್ಗೆ ರಷ್ಯಾದ ಅಧ್ಯಕ್ಷ ವ್ಲಾಡಿಮಿರ್‌ ಪುಟಿನ್‌ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಂತಾಪ ಸಂದೇಶವನ್ನು ಕಳುಹಿಸಿದ್ದಾರೆ ಎಂದು ಭಾರತದಲ್ಲಿರುವ ರಷ್ಯಾದ ರಾಯಭಾರ ಕಚೇರಿ ತನ್ನ ಎಕ್ಸ್‌ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದೆ.

ಉತ್ತರ ಪ್ರದೇಶದ ಹತ್ರಾಸ್‌ನಲ್ಲಿ ಮಂಗಳವಾರ ಸ್ವಯಂಘೋಷಿತ ದೇವಮಾನವ ಭೋಲೆ ಬಾಬಾ ಎಂದು ಕರೆಸಿಕೊಳ್ಳುವ ನಾರಾಯಣ ಸಾಕರ್ ಹರಿ ಆಯೋಜಿಸಿದ್ದ ಸತ್ಸಂಗದಲ್ಲಿ ಕಾಲ್ತುಳಿತ ಸಂಭವಿಸಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ 121 ಜನರು ಸಾವನ್ನಪ್ಪಿದ್ದಾರೆ. ಲಕ್ಷಕ್ಕೂ ಹೆಚ್ಚು ಜನರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರಿಂದ ದುರ್ಘಟನೆ ಸಂಭವಿಸಿದೆ. ಘಟನೆಯ ತನಿಖೆಗೆ ಸಮಿತಿಯನ್ನು ರಚಿಸಲಾಗಿದೆ.

ಹೆಚ್ಚಿನ ಸುದ್ದಿ