Sunday, July 7, 2024
Homeಚುನಾವಣೆ 2023HD DEVE GOWDA: ಮೋದಿ ಉತ್ತಮ ಆಡಳಿತಕ್ಕೆ ಚುನಾವಣಾ ಫಲಿತಾಂಶ ಸಾಕ್ಷಿ: ಹೆಚ್ ಡಿಡಿ

HD DEVE GOWDA: ಮೋದಿ ಉತ್ತಮ ಆಡಳಿತಕ್ಕೆ ಚುನಾವಣಾ ಫಲಿತಾಂಶ ಸಾಕ್ಷಿ: ಹೆಚ್ ಡಿಡಿ

ಬೆಂಗಳೂರು: ನಾಲ್ಕು ರಾಜ್ಯಗಳ ಚುನಾವಣೆಯಲ್ಲಿ ರಾಜಸ್ಥಾನ್ (Rajasthan), ಮಧ್ಯಪ್ರದೇಶ್ (Madhya pradesh) ಹಾಗೂ ಛತ್ತೀಸ್ ಗಢದಲ್ಲಿ (Chattisgarh) ಭರ್ಜರಿ ಗೆಲುವು ಸಾಧಿಸಿದ ಬಿಜೆಪಿಗೆ ಹಾಗೂ ಪ್ರಧಾನಿ ಮೋದಿಗೆ (Narendra Modi) ಮಾಜಿ ಪ್ರಧಾನಿ ಹೆಚ್​ಡಿ ದೇವೇಗೌಡ (HD Deve Gowda) ಅವರು ಶುಭ ಕೋರಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ (X) ಬರೆದುಕೊಂಡಿರುವ ಅವರು, ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢದಲ್ಲಿ ಅದ್ಭುತ ಪ್ರದರ್ಶನಕ್ಕಾಗಿ ನನ್ನ ಪಕ್ಷವು ಬಿಜೆಪಿಯ ಉನ್ನತ ನಾಯಕತ್ವವನ್ನು, ವಿಶೇಷವಾಗಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅಭಿನಂದಿಸುತ್ತದೆ ಎಂದಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಅವರ ಅದ್ಭುತ ಪ್ರದರ್ಶನಕ್ಕೆ ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್ ಗಢ 2023ರ ಫಲಿತಾಂಶ ಸಾಕ್ಷಿಯಾಗಿದೆ ಎಂದರು.

ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸ್​ಗಢದಲ್ಲಿ ಬಿಜೆಪಿ ಗೆಲುವಿಗೆ ಶುಭಾಶಯ ಕೋರಿದ ಮಾಜಿ ಸಿಎಂ ಹೆಚ್​ಡಿ ಕುಮಾರಸ್ವಾಮಿ, ಬಿಜೆಪಿಯ ಎಲ್ಲ ನಾಯಕರಿಗೆ ಅಭಿನಂದನೆಗಳು ಹಾಗೂ ಶುಭಾಶಯಗಳು ಎಂದರು.

ಹೆಚ್ಚಿನ ಸುದ್ದಿ