Tuesday, November 5, 2024
Homeಟಾಪ್ ನ್ಯೂಸ್ರಮೇಶ್ ಕುಮಾರ್ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ರಮೇಶ್ ಕುಮಾರ್ ವಿರುದ್ಧ ಹೆಚ್‌ಡಿಕೆ ವಾಗ್ದಾಳಿ

ಕೋಲಾರ: ಮಾಜಿ ಸ್ಪೀಕರ್, ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಕುಮಾರ್ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ಜೆಡಿಎಸ್ ಅಭ್ಯರ್ಥಿ ಸಮೃದ್ಧಿ ಮಂಜುನಾಥ್ ಅವರ ನೇತೃತ್ವದಲ್ಲಿ ಶಿನಿಗೇನಹಳ್ಳಿಯಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಅವರು, ಕೆಸಿ ವ್ಯಾಲಿ ಯೋಜನೆ ಹೆಸರಿನಲ್ಲಿ ಮಾಜಿ ಸ್ಪೀಕರ್ ರಮೇಶ್ ಕುಮಾರ್ ಅವರು ಜೇಬು ತುಂಬಿಸಿಕೊಂಡಿದ್ದಾರೆ.. ಆ ಹಣದಿಂದಲೇ ಅವರು ಚುನಾವಣೆಗೆ ಹೋಗುತ್ತಿದ್ದಾರೆ ಎಂದರು.

ಯರಗೋಳ್ ನೀರಾವರಿ ಯೋಜನೆಗೆ ವಿಷಯುಕ್ತ ಕೆಸಿ ವ್ಯಾಲಿ ನೀರಾವರಿ ಯೋಜನೆ ನೀರನ್ನು ಸೇರಿಸಲು ಹೊರಟಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಶುದ್ಧೀಕರಿಸಿದ ಕುಡಿಯುವ ನೀರು ಕೊಡುತ್ತೇವೆ. ನಮ್ಮ ಸರ್ಕಾರ ಬಂದರೆ ಮೂರನೇ ಹಂತದ ಶುದ್ದೀಕರಣ ಮಾಡಿ ಶುದ್ದ ಕುಡಿಯುವ ನೀರು ಕೊಡುತ್ತೇವೆ ಎಂದು ನಾನು ಶಪಥ ಮಾಡಿದ್ದೇನೆ ಎಂದರು.

ಹೆಚ್ಚಿನ ಸುದ್ದಿ

error: Content is protected !!