Sunday, July 7, 2024
Homeಟಾಪ್ ನ್ಯೂಸ್HD KUMARASWAMY: ಉಕ್ಕು ಉತ್ಪಾದನೆ ಹೆಚ್ಚಳಕ್ಕೆ ಶೀಘ್ರ ಕ್ರಮ : ಹೆಚ್‌ಡಿಕೆ

HD KUMARASWAMY: ಉಕ್ಕು ಉತ್ಪಾದನೆ ಹೆಚ್ಚಳಕ್ಕೆ ಶೀಘ್ರ ಕ್ರಮ : ಹೆಚ್‌ಡಿಕೆ

ನವದೆಹಲಿ: ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿರುವ ಸಂಸ್ಥೆಯನ್ನು ಮೇಲೆತ್ತುವ ಸಲುವಾಗಿ ಉಕ್ಕು ಉತ್ಪಾದನೆಯನ್ನು ಹೆಚ್ಚಳ ಮಾಡಬೇಕು ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ (HD Kumaraswamy) ಹೇಳಿದರು.

ವೈಜಾಗ್ ಉಕ್ಕು ಕಾರ್ಖಾನೆಯ (Rashtriya Ispat Nigam Ltd-RNIL) ಪ್ರಗತಿ ಪರಿಶೀಲನೆ ನಡೆಸಿದ ಅವರು, ಉನ್ನತ ಅಧಿಕಾರಿಗಳು ಹಾಗೂ ಕಂಪನಿಯ ಉನ್ನತ ಅಧಿಕಾರಿಗಳ ಜತೆಗೆ ಮಹತ್ವದ ಸಭೆ ನಡೆಸಿದರು. ಈ ವೇಳೆ ಕಂಪನಿಯ ಕಾರ್ಯ ಚಟುವಟಿಕೆ, ಆರ್ಥಿಕ ಸ್ಥಿತಿಗತಿ, ಉತ್ಪಾದನೆ, ಹೊಸ ಉಪಕ್ರಮಗಳ ಬಗ್ಗೆ ಮಾಹಿತಿ ಪಡೆದುಕೊಂಡರು.

ಸಭೆಯಲ್ಲಿ ಹಾಜರಿದ್ದ ಕಂಪನಿಯ ಅಧ್ಯಕ್ಷ – ವ್ಯವಸ್ಥಾಪಕ ನಿರ್ದೇಶಕರು ಹಾಗೂ ಆಡಳಿತ ಮಂಡಳಿಯ ನಿರ್ದೇಶಕರಿಂದ ಸಮಗ್ರ ಮಾಹಿತಿ ಪಡೆದುಕೊಂಡ ಅವರು, ಮೊದಲು ಉತ್ಪಾದನೆ ಹೆಚ್ಚಳ, ಕ್ಷಮತೆ ವೃದ್ಧಿಸಿಕೊಳ್ಳುವ ಕೆಲಸ ಮಾಡಿ, ನಂತರ ಆರ್ಥಿಕವಾಗಿ ಕಂಪನಿಗೆ ಹೇಗೆ ನೆರವಾಗಬೇಕು ಎನ್ನುವುದು ಆಲೋಚನೆ ಮಾಡುತ್ತೇವೆ ಎಂದು ಹೇಳಿದರು.

ವಾರ್ಷಿಕ 300 ದಶಲಕ್ಷ ಟನ್ ಉಕ್ಕು ಉತ್ಪಾದನೆ ಮಾಡಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಗುರಿ ನಿಗದಿ ಮಾಡಿದ್ದಾರೆ. ಈ ಗುರಿ ಮುಟ್ಟುವ ಬಗ್ಗೆ ನಾವು ಅವಿರತವಾಗಿ ಕೆಲಸ ಮಾಡಬೇಕು. ಅದಕ್ಕೆ ಪೂರಕವಾಗಿ ವಿಶಾಖಪಟ್ಟಣ ಉಕ್ಕು ಕಾರ್ಖಾನೆ ಉತ್ಪಾದನೆ ಪ್ರಮಾಣವನ್ನು ಹೆಚ್ಚಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.

ದೇಶೀಯವಾಗಿ ಉಕ್ಕು ಕ್ಷೇತ್ರವನ್ನು ಬಲಪಡಿಸಬೇಕು. ಸ್ಪೆಶಾಲಿಟಿ ಸ್ಟೀಲ್ ಮತ್ತು ಗ್ರೀನ್ ಸ್ಟೀಲ್ ಉತ್ಪಾದನೆಗೆ ನಾವು ಹೆಚ್ಚು ಒತ್ತು ಕೊಡಬೇಕಿದೆ. ತಾಂತ್ರಿಕ ಮತ್ತು ಆರ್ಥಿಕ ಶಕ್ತಿಯನ್ನು ಹೆಚ್ಚಿಸಿಕೊಂಡು ಸವಾಲುಗಳನ್ನು ಎದುರಿಸಬೇಕಿದೆ. ಕಾರ್ಖಾನೆ ಪುನಶ್ಚೇತನಕ್ಕೆ ಸಮಗ್ರ ಪ್ರಸ್ತಾವನೆ ಸಲ್ಲಿಸಿ ಎಂದರು.

ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಶ್ರೀನಿವಾಸ್ ಭೂಪತಿರಾಜು ವರ್ಮ, ಉಕ್ಕು ಸಚಿವಾಲಯದ ಕಾರ್ಯದರ್ಶಿ ನಾಗೇಂದ್ರ ನಾಥ ಸಿನ್ಹಾ, ಹೆಚ್ಚುವರಿ ಕಾರ್ಯದರ್ಶಿ ಸುಕೃತಿ ಲಿಖಿ, ಭಾರತೀಯ ಉಕ್ಕು ಪ್ರಾಧಿಕಾರದ ಅಧ್ಯಕ್ಷ ಅಮರೆಂದು ಪ್ರಕಾಶ್, ವಿಶಾಖಪಟ್ಟಣ ಉಕ್ಕು ಕಾರ್ಖಾನೆಯ ಅಧ್ಯಕ್ಷ – ವ್ಯವಸ್ಥಾಪಕ ನಿರ್ದೇಶಕ ಅತುಲ್ ಭಟ್ ಇತರರಿದ್ದರು.

ಹೆಚ್ಚಿನ ಸುದ್ದಿ