Saturday, November 2, 2024
Homeಟಾಪ್ ನ್ಯೂಸ್ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 2 ಲಕ್ಷ ಪ್ರೋತ್ಸಾಹ ಧನ – ಎಚ್ ಡಿ ಕೆ ಭರವಸೆ

ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಮಕ್ಕಳಿಗೆ 2 ಲಕ್ಷ ಪ್ರೋತ್ಸಾಹ ಧನ – ಎಚ್ ಡಿ ಕೆ ಭರವಸೆ

ಹಾಸನ: ಮದುವೆಯಾಗಲು ಪರದಾಡುತ್ತಿರುವ ರೈತ ಗಂಡುಮಕ್ಕಳ ನೆರವಿಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಧಾವಿಸಿದ್ದಾರೆ. ರೈತರ ಮಕ್ಕಳ ಮದುವೆಯಾಗಲು ಹೆಣ್ಣುಮಕ್ಕಳು ಹಿಂದೇಟು ಹಾಕುತ್ತಿರುವ ಹಿನ್ನೆಲೆ ಮಾಜಿ ಮುಖ್ಯಮಂತ್ರಿ ಹೆಚ್‌.ಡಿ ಕುಮಾರಸ್ವಾಮಿ ಅವರು ಭರ್ಜರಿ ಘೋಷಣೆ ಮಾಡಿದ್ದಾರೆ. ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ 2 ಲಕ್ಷ ರೂಪಾಯಿ ನೀಡುವುದಾಗಿ ಭರವಸೆ ನೀಡಿದ್ದಾರೆ.

ಗುರುವಾರ ಬೇಲೂರಿನಲ್ಲಿ ನಡೆದ ಪಂಚರತ್ನ ಯಾತ್ರೆಯಲ್ಲಿ ಮಾತನಾಡಿದ ಅವರು, ಹಳ್ಳಿಯ ರೈತರ ಮಕ್ಕಳಿಗೆ ಯಾರೂ ಹೆಣ್ಣು ಕೊಡುತ್ತಿಲ್ಲ. ಇದೊಂದು ದೊಡ್ಡ ಸಾಮಾಜಿಕ ಸಮಸ್ಯೆಯಾಗಿದೆ. ಒಂದೊಂದು ಊರಲ್ಲಿ 50 ರಿಂದ 100 ಗಂಡು ಮಕ್ಕಳು ಹುಡುಗಿ ಸಿಗದೇ ಕಾಯುತ್ತಿದ್ದಾರೆ. ಹೆಣ್ಣು ಸಿಗಲಿಲ್ಲ ಎಂದು ನಿರಾಸರಾಗಿದ್ದಾರೆ. ಹೀಗಾಯೇ ಸೂಕ್ತ ತೀರ್ಮಾನ ಕೈಗೊಂಡು ರೈತರ ಮಕ್ಕಳನ್ನು ಮದುವೆಯಾಗುವ ಹೆಣ್ಣು ಮಕ್ಕಳಿಗೆ ಎರಡು ಲಕ್ಷ ರೂಪಾಯಿ ಪ್ರೋತ್ಸಾಹ ಧನ ನೀಡಲಾಗುವುದು ಎಂದು ತಿಳಿಸಿದರು.

ಹೆಚ್ಚಿನ ಸುದ್ದಿ

error: Content is protected !!