ಬೆಂಗಳೂರು: ಬಿಸಿಲಿನಿಂದ ಹೈರಾಣಾಗಿದ್ದ ಬೆಂಗಳೂರಿಗರಿಗೆ ಸೋಮವಾರ ರಾತ್ರಿ ಸುರಿದ ಮಳೆ ತಂಪೆರೆದಿದೆ. ಈ ಮಳೆ ಮುಂದುವರಿಯಲಿದ್ದು, ಇನ್ನೂ ಮೂರು ದಿನಗಳ ಕಾಲ ಸಿಲಿಕಾನ್ ಸಿಲಿಕಾನ್ ಸಿಟಿಯಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯಲಿದೆ. ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಸೋಮವಾರ ಯಶವಂತಪುರ, ಕೆ ಆರ್ ಮಾರ್ಕೆಟ್ , ಕಾರ್ಪೊರೇಷನ್ ಸುತ್ತಮುತ್ತ ಭಾರೀ ಪ್ರಮಾಣದಲ್ಲಿ ಮಳೆ ಸುರಿದಿದೆ. ಪರಿಣಾಮ ಧಿಢೀರ್ ಮಳೆಯಿಂದ ವಾಹನ ಸವಾರರ ಪರದಾಡುವಂತಾಗಿತ್ತು. ಮಳೆ ಬಿಟ್ಟು ಬಿಟ್ಟು ಬಂದಿದ್ದರಿಂದ ವಾಹನ ಸವಾರರಿಗೆ ಕಿರಿಕಿರಿ ಉಂಟಾಗಿತ್ತು