ಮುಂಬೈ : ಭಾನುವಾರ ರಾತ್ರಿ ಸುರಿದ ಭಾರೀ ಮಳೆ-ಗಾಳಿಗೆ ಮಹಾರಾಷ್ಟ್ರದ ಅಕೋಲ ಜಿಲ್ಲೆಯ ಪರಸ್ ಗ್ರಾಮದಲ್ಲಿ ಭಾರೀ ಗಾತ್ರದ ಮರ ಬಿದ್ದು 7 ಮಂದಿ ಮೃತಪತ್ತಿದ್ದು, 50ಕ್ಕೂ ಹೆಚ್ಚು ಜನರು ಗಾಯಗೊಂಡಿರುವ ಘಟನೆ ನಡೆದಿದೆ.
ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಅಕಾಲಿಕ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿದೆ. ಭಾನುವಾರ ರಾತ್ರಿಯೂ ಸಹ ಅಕೋಲ ಜಿಲ್ಲೆಯಲ್ಲಿ ಭಾರೀ ಮಳೆಯಾಗಿದೆ. ಈ ವೇಳೆ ಟಿನ್ ಶೇಡ್ ಬೃಹತ್ ಗಾತ್ರದ ಮರ ಬಿದ್ದು 7 ಮಂದಿ ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ತಕ್ಷಣ ಬಾಲಾಪುರ್ ಪೊಲೀಸ್ ಇಲಾಖೆಯ ಇನ್ಸ್ ಪೆಕ್ಟರ್ ಅನಿಲ್ ಜುಮ್ಲೆ ಕೂಡಲೇ ಸ್ಥಳಕ್ಕೆ ಧಾವಿಸಿ, ಸ್ಥಳೀಯರ ನೆರವಿನೊಂದಿಗೆ ಮರದ ಕೆಳಗೆ ಸಿಕ್ಕಿಹಾಕಿಕೊಂಡವರನ್ನು ಹೊರತೆಗೆದಿದ್ದಾರೆ. ಗಾಯಗೊಂಡವರನ್ನು ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಅಕೊಲ ಜಿಲ್ಲಾಧಿಕಾರಿ ನಿಮ ಅರೋರ ತಿಳಿಸಿದ್ದಾರೆ.
ಭಾರೀ ಮಳೆ ಸುರಿಯುತ್ತಿದ್ದಾಗ ಮೃತಪಟ್ಟವರು ಮತ್ತು ಗಾಯಗೊಂಡವರು ಟಿನ್ ಶೆಡ್ ಒಳಗೆ ಆಶ್ರಯ ಪಡೆಯುತ್ತಿದ್ದರು. ಈ ವೇಳೆ ತೀವ್ರ ಗಾಳಿ ಮಳೆಗೆ ಹಳೆಯ ದೊಡ್ಡ ಮರ ಟಿನ್ ಶೇಡ್ ಮೇಲೆ ಬಿದ್ದು ದುರ್ಘಟನೆ ಸಂಭವಿಸಿದೆ.