ಬೆಂಗಳೂರು: ರಾಜ್ಯದಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ಹೆಚ್ಚಾಗಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಎಂದು ಈ ಹಿಂದೆಯೇ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಆದೇಶ ನೀಡಿದ್ದರೂ ಸಹ, ಸರ್ಕಾರ ಆದೇಶ ಪಾಲನೆ ಮಾಡಿಲ್ಲ ಎಂದು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಲಾಗಿತ್ತು.
ಇಂದು ಈ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿಗೊಳಿಸುವಂತೆ ಆದೇಶಿಸಿದೆ. ಈ ಪ್ರಕರಣದಲ್ಲಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ, ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹಾಗೂ ಇನ್ನುಳಿದವರನ್ನು ಆರೋಪಿಗಳನ್ನಾಗಿ ಮಾಡಲಾಗಿದೆ.
ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಮನೆಗಳಲ್ಲಿ ಹಾಗೂ ಸಾಮಾನ್ಯ ಚಿಲ್ಲರೆ ಅಂಗಡಿಗಳಲ್ಲಿ ಮದ್ಯವನ್ನು ಅಕ್ರಮವಾಗಿ ಮಾರಾಟ ಮಾಡಲಾಗುತ್ತಿದೆ ಎಂದು 2020 ರಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು.