ಬೆಂಗಳೂರು : ಹನಿಟ್ರ್ಯಾಪ್ ಪ್ರಕರಣದಿಂದ ಕಾಂಗ್ರೆಸ್ ಪಕ್ಷಕ್ಕೆ ಮುಜುಗರವಾಗಿಲ್ಲ ಎಂದು ಸಚಿವ ಚೆಲುವನಾರಾಯಣ ಸ್ವಾಮಿ ಹೇಳಿದ್ದಾರೆ. ಬುಧವಾರ ಮಾಧ್ಯಮಗಳೊಂದಿಗೆ ಈ ಕುರಿತು ಪ್ರತಿಕ್ರಿಯಿಸಿದ ಅವರು, ವಿಧಾನಸಭೆಯಲ್ಲಿ ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಈ ಕುರಿತು ಪ್ರಸ್ತಾಪಿಸಿದ್ದಾರೆ. ಕೇಂದ್ರ ಮಟ್ಟದವರೂ ಹನಿಟ್ರ್ಯಾಪ್ ನಲ್ಲಿ ಸಿಲುಕಿದ್ದಾರೆಂದು ಆರೋಪಿಸಿದ್ದಾರೆ ಎಂದರು.
ಕಳೆದ ಒಂದು ವರ್ಷದಲ್ಲಿ ಹಲವು ರಾಜಕಾರಣಿಗಳು ತಮ್ಮ ವಿರುದ್ಧ ವಿಡಿಯೋಗಳನ್ನು ಮಾಧ್ಯಮಗಳಲ್ಲಿ ಬಿಡುಗಡೆ ಮಾಡದಂತೆ ನ್ಯಾಯಾಲಯದಿಂದ ತಡೆಯಾಜ್ಞೆ ತಂದಿದ್ದರು. ಈ ವಿಷಯವನ್ನೆಲ್ಲಾ ಚರ್ಚಿಸಿಯೇ ಅವರು ನಿರ್ಧಾರಕ್ಕೆಕ ಬಂದಿರಬಹುದು. ಈ ಬಗ್ಗೆ ಸರ್ಕಾರ ಏನು ನಿರ್ಧಾರ ಕೈಗೊಳ್ಳುತ್ತದೆಯೇ ಕಾದು ನೋಡೋಣ ಎಂದರು.
ನಿನ್ನೆಯಷ್ಟೇ ಸಚಿವ ರಾಜಣ್ಣ ತಮ್ಮ ವಿರುದ್ದ ಹನಿಟ್ರ್ಯಾಪ್ ಯತ್ನ ನಡೆದಿದೆ ಎಂದು ಗೃಹಸಚಿವರಲ್ಲಿ ದೂರು ನೀಡಿದ್ದರು. ಗೃಹಸಚಿವ ಜಿ. ಪರಮೇಶ್ವರ್ ಈ ಬಗ್ಗೆ ತನಿಖೆ ನಡೆಸುವಂತೆ ಡಿಜಿ ಅಲೋಕ್ ಮೋಹನ್ ಗೆ ಪತ್ರ ರವಾನಿಸಿದ್ದರು.