Monday, November 4, 2024
Homeಟಾಪ್ ನ್ಯೂಸ್ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ: ರಾಹುಲ್ ಗಾಂಧಿ

ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ: ರಾಹುಲ್ ಗಾಂಧಿ

ನವದೆಹಲಿ: ಇಂದು ರಾಹುಲ್‌ ಗಾಂಧಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡುತ್ತಾ ಪತ್ರಕರ್ತರ ಪ್ರಶ್ನೆಗೆ ತೀಕ್ಷ್ಣ ಉತ್ತರಗಳನ್ನೇ ನೀಡಿದ್ದಾರೆ. ಮೋದಿ ಉಪನಾಮ ಕೇಸ್‌ನಲ್ಲಿ ಜೈಲು ಶಿಕ್ಷೆ ತೀರ್ಪು ಪ್ರಕಟಗೊಂಡ ಹಿನ್ನೆಲೆಯಲ್ಲಿ ಅನರ್ಹಗೊಂಡಿರುವ ಸಂಸದ ರಾಹುಲ್‌ ಗಾಂಧಿ ಪತ್ರಿಕಾಗೋಷ್ಠಿ ನಡೆಸಿದ್ರು.. ಈ ವೇಳೆ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ರಾಹುಲ್ ಗಾಂಧಿ ತಮ್ಮ ಮೇಲೆ ಬಿಜೆಪಿ ಮಾಡುತ್ತಿರುವ ಪ್ರಹಾರದ ಬಗ್ಗೆ ವಿವರಣೆ ನೀಡಿದ್ರು..

ನನ್ನ ಪ್ರಶ್ನೆಗಳಿಗೆ ಹೆದರಿರುವ ಬಿಜೆಪಿ ನನ್ನನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಿದೆ. ಅದಾನಿ ಸಮೂಹಕ್ಕೆ ನರೇಂದ್ರಮೋದಿಯವರು ಮಾಡಿರುವ ಸಹಾಯದ ಕುರಿತು ನಾನು ಸದನದಲ್ಲಿ ಪ್ರಶ್ನೆಗಳನ್ನು ಎತ್ತುತ್ತಿರುವುದು ಬಿಜೆಪಿಗೆ ಸಹ್ಯವಾಗುತ್ತಿಲ್ಲ.. ಈ ಎಲ್ಲಾ ಕಾರಣದಿಂದ ನನ್ನನ್ನು ಅನರ್ಹಗೊಳಿಸಲಾಗಿದೆ ಎಂದ್ರು..

ಇನ್ನು ಪತ್ರಕರ್ತರೊಬ್ಬರು ರಾಹುಲ್ ಗಾಂಧಿ ಮೋದಿ ವಿರುದ್ಧದ ಟೀಕೆಗೆ ಕ್ಷಮೆ ಯಾಚಿಸಬೇಕು ಎಂದು ಬಿಜೆಪಿ ಹೇಳುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿ `ಕ್ಷಮೆ ಕೇಳಲು ನಾನು ಸಾವರ್ಕರ್‌ ಅಲ್ಲ.. ನಾನು ಗಾಂಧಿ. ಗಾಂಧಿಗಳು ಯಾರ ಬಳಿಯೂ ಕ್ಷಮೆ ಕೇಳುವುದಿಲ್ಲ’ ಎಂದ್ರು.

ಹೆಚ್ಚಿನ ಸುದ್ದಿ

error: Content is protected !!