Thursday, March 20, 2025
Homeಟಾಪ್ ನ್ಯೂಸ್ಸಿದ್ದರಾಮಯ್ಯಗೆ ಈ ಪರಿಸ್ಥಿತಿ ಬೇಕಿತ್ತಾ? : ಹೆಚ್‌.ಡಿ.ಕುಮಾರಸ್ವಾಮಿ

ಸಿದ್ದರಾಮಯ್ಯಗೆ ಈ ಪರಿಸ್ಥಿತಿ ಬೇಕಿತ್ತಾ? : ಹೆಚ್‌.ಡಿ.ಕುಮಾರಸ್ವಾಮಿ

ಮೈಸೂರು: ಪೂರ್ಣಾವಧಿ ಮುಖ್ಯಮಂತ್ರಿ ಆಗಿದ್ದವರು, ಉಪ ಮುಖ್ಯಮಂತ್ರಿ ಆಗಿದ್ದವರು, 13 ಬಜೆಟ್ ಮಂಡಿಸಿದವರು ಅವರು. ಅಂತಹವರಿಗೆ ಒಂದು ಸುರಕ್ಷಿತ ಕ್ಷೇತ್ರ ಹುಡುಕಿಕೊಳ್ಳಲು ಆಗುತ್ತಿಲ್ಲ. ಇದರ ಬಗ್ಗೆ ನಾನು ವ್ಯಂಗ್ಯ ಮಾಡಲ್ಲ, ಬದಲಿಗೆ ಅನುಕಂಪ ಬರುತ್ತಿದೆ ಎಂದು ಕುಮಾರಸ್ವಾಮಿ ಮೈಸೂರಿನಲ್ಲಿ ಹೇಳಿದ್ರು..

ಕೋಲಾರ ಕ್ಷೇತ್ರವೂ ಸೇರಿ ಜಿಲ್ಲೆಯಲ್ಲಿ 6 ಸ್ಥಾನಗಳ ಪೈಕಿ ಕಡೆ ನಾವು ಮುಂದೆ ಇದ್ದೇವೆ. ಅಲ್ಲೆಲ್ಲಾ ನಮ್ಮ ಅಭ್ಯರ್ಥಿಗಳು ಗೆದ್ದೆ ಗೆಲ್ಲುತ್ತಾರೆ. ಹೈ ಕಮಾಂಡ್ ಹೆಸರೇಳಿ ಸ್ಪರ್ಧೆಯಿಂದ ಸಿದ್ದರಾಮಯ್ಯ ಹಿಂದೆ ಸರಿದಿರಬಹುದು. ಆದರೆ 5 ವರ್ಷದ ಸಂಪೂರ್ಣ ಅವಧಿ ಮುಗಿಸಿರುವ ಸಿಎಂ ಕಳೆದ ಒಂದು ವರ್ಷದಿಂದ ಸ್ಪರ್ಧೆಯ ಬಗ್ಗೆ ಕ್ಷೇತ್ರ ಹುಡುಕಾಡುತ್ತಿದ್ದಾರೆ. ಇದನ್ನು ನೋಡಿ ನನಗೆ ಅನುಕಂಪ ಬರುತ್ತಿದೆ. ಅನುಭವಿ ರಾಜಕಾರಣಿ, ನಾಯಕನಿಗೆ ಆತಂಕವನ್ನು ಅವರೇ ಸೃಷ್ಟಿ ಮಾಡಿಕೊಂಡಿದ್ದಾರೆ. ಇಂತಹ ಪರಿಸ್ಥಿತಿ ಬೇಕಿತ್ತಾ? ಎಂದು ಪ್ರಶ್ನಿಸಿದರು.

ಇನ್ನು ಕಾಂಗ್ರೆಸ್ ಪಕ್ಷದ ಯೋಜನೆಗಳ ಕುರಿತು ಮಾತನಾಡಿದ ಕುಮಾರಸ್ವಾಮಿ, ಕಾಂಗ್ರೆಸ್ ಪಕ್ಷ ಗ್ಯಾರಂಟಿ ಕಾರ್ಡ್ ಕೊಡುತ್ತಿದೆ. ಅದು ಗ್ಯಾರಂಟಿ ಕಾರ್ಡ್ ಅಲ್ಲ, ಡ್ಯುಪ್ಲಿಕೇಟ್ ಕಾರ್ಡ್. ಗೃಹ ಲಕ್ಷ್ಮಿ ಕಾರ್ಡ್‌ಗೆ 25 ಸಾವಿರ ಕೋಟಿ ರೂ. ಬೇಕು. ಅದನ್ನು ಎಲ್ಲಿಂದ ತರ್ತಾರೆ? ಎಂದು ಪ್ರಶ್ನಿಸಿದ್ರು.

ಆದರೆ ನನ್ನ ಕಾರ್ಯಕ್ರಮ ಸರ್ಕಾರದ ಆದಾಯ ಹೆಚ್ಚಿಸುವ ಕಾರ್ಯಕ್ರಮ‌. ಒಂದು ಅವಧಿಯ ಸರಕಾರ ಕೊಡಿ ಅಂತ ಕೇಳುತ್ತಿದ್ದೇನೆ ಎಂದು ಮತದಾರರಲ್ಲಿ ಮನವಿ ಮಾಡಿದ್ರು

ಹೆಚ್ಚಿನ ಸುದ್ದಿ

error: Content is protected !!