ಸಿದ್ದರಾಮಯ್ಯ ಅವರಿಗೆ ಜನರ ಮೂಲಕವೇ ಉತ್ತರ ಕೊಡಿಸುತ್ತೇನೆ ಎಂದು ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಗುಡುಗಿದ್ದಾರೆ.
ಸಿದ್ದರಾಮಯ್ಯ ಜೆಡಿಎಸ್‌ನಲ್ಲಿ ಪಾಳೆಗಾರಿಕೆ ಮಾಡಿ ದೇವೆಗೌಡರನ್ನು ಹೆದರಿಸಿಟ್ಟುಕೊಂಡಿದ್ದರು. ಜೆಡಿಎಸ್ ಬೆಳೆಸದಿದ್ದರೆ ನಿಮ್ಮನ್ನು ಕಾಂಗ್ರೆಸ್‌ನವರು ಮೂಸಿಯೂ ನೋಡುತ್ತಿರಲಿಲ್ಲ. ಅಷ್ಟು ತಾಕತ್ತಿದ್ದರೆ ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷ ಕಟ್ಟಿ ಎರಡು ಸೀಟು ತರಲಿ ನೋಡೋಣ ಎಂದು ಸಿದ್ದರಾಮಯ್ಯರಿಗೆ ಕುಮಾರಸ್ವಾಮಿ ಅವರು ಸವಾಲು ಹಾಕಿದ್ದಾರೆ.
ಮೈಸೂರಲ್ಲಿ ಎಂಟು ಜನ ಶಾಸಕರನ್ನು ಕರೆದುಕೊಂಡು ಹೋಗಿ ಮತ್ತೆ ಎಷ್ಟು ಗೆಲ್ಲಿಸಿಕೊಂಡರು. ಹೋಗಲಿ ಅವರು ಗೆದ್ದಿದ್ದು ಎಷ್ಟು ವೋಟಿನಿಂದ? ಕೇವಲ 200 ವೋಟಿನಿಂದ ಗೆದ್ದು ಮುಖ ಉಳಿಸಿಕೊಂಡರು. ಅವರಿಗೆ ಜನತೆಯ ಮೂಲಕ ಉತ್ತರ ಕೊಡಿಸುತ್ತೇನೆ ಎಂದು ಕುಮಾರಸ್ವಾಮಿ ಸಿದ್ದರಾಮಯ್ಯರಿಗೆ ಟಾಂಗ್ ನೀಡಿದ್ದಾರೆ
ಹಿಂದೆ ಇಕ್ಬಾಲ್ ಅನ್ಸಾರಿ ಅವರನ್ನು ಮಂತ್ರಿ ಮಾಡಬೇಡಿ ಅಂತ ಗಲಾಟೆ ಮಾಡಿ, ಸಭೆಯಿಂದ ಟವೆಲ್ ಕೊಡವಿ ಸಿದ್ದರಾಮಯ್ಯ ಎದ್ದು ಹೋಗಿದ್ದರು. ಅಂಥ ವ್ಯಕ್ತಿ ಈಗ ನಮ್ಮ ಪಕ್ಷದ ಬಗ್ಗೆ ಮಾತನಾಡುತ್ತಾರೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.