Sunday, July 7, 2024
Homeಟಾಪ್ ನ್ಯೂಸ್Rain Update: ಮೂರ್ನಾಲ್ಕು ದಿನ ಹಿತಕರ ವಾತಾವರಣ - ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

Rain Update: ಮೂರ್ನಾಲ್ಕು ದಿನ ಹಿತಕರ ವಾತಾವರಣ – ನಾಲ್ಕು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್!

ಬೆಂಗಳೂರು: ಈಗಾಗಲೇ ಮುಂಗಾರು ಆರಂಭವಾಗಿ ತಿಂಗಳು ಕಳೆದಿದೆ. ಮಲೆನಾಡು, ಕರಾವಳಿ ಹಾಗೂ ಉತ್ತರ ಒಳನಾಡಿನ ಕೆಲವೇ ಭಾಗಗಳಲ್ಲಿ ಸ್ವಲ್ಪ ಮಳೆಯಾಗಿದೆ. ಅದನ್ನು ಹೊರತು ಪಡಿಸಿ ಮಳೆಯ ಪ್ರಮಾಣ ಕಡಿಮೆ ಎಂದೇ ಹೇಳಬಹುದು.

ನಗರದ ಕೆಲವೆಡೆ ಬೆಳಗ್ಗೆ ತುಂತುರು ಮಳೆಯಾಗುವ ಸಾಧ್ಯತೆ ಇದೆ. ಮುಂದಿನ 3-4 ದಿನ ಇದೇ ರೀತಿಯ ವಾತಾವರಣ ಇರಲಿದೆ ಎಂದು ರಾಜ್ಯ ಹವಮಾನ ಇಲಾಖೆ ಮಾಹಿತಿ ನೀಡಿದೆ.

ಕರಾವಳಿ ಮಲೆನಾಡು ಭಾಗಕ್ಕೆ ಭಾರಿ ಮಳೆಯ ಮುನ್ಸೂಚನೆ ಇದ್ದು, ಉ.ಕನ್ನಡ, ದ.ಕನ್ನಡಣ, ಉಡುಪಿ, ಕೊಡಗು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನುಳಿದಂತೆ ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರು, ವಿಜಯನಗರದಲ್ಲಿ ಮಳೆಯಾಗಲಿದೆ.

ಹೆಚ್ಚಿನ ಸುದ್ದಿ