Saturday, January 25, 2025
Homeಟಾಪ್ ನ್ಯೂಸ್ಕರ್ನಾಟಕ ಚುನಾವಣೆ: ನೂರು ಕೋಟಿ ಮುಟ್ಟಿದ ಚುನಾವಣಾ ಅಕ್ರಮ!

ಕರ್ನಾಟಕ ಚುನಾವಣೆ: ನೂರು ಕೋಟಿ ಮುಟ್ಟಿದ ಚುನಾವಣಾ ಅಕ್ರಮ!

ಬೆಂಗಳೂರು: ರಾಜ್ಯದಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದೆ. ನಗದು ವಹಿವಾಟುಗಳ ಮೇಲೆ ಚುನಾವಣಾ ಆಯೋಗ ನಿಗಾ ಇರಿಸಿದ್ದು, ಚೆಕ್​ಪೋಸ್ಟ್​​ಗಳಲ್ಲಿ ಹೆಚ್ಚಿನ ಪರಿಶೀಲನೆ ನಡೆಸಲಾಗುತ್ತಿದೆ. ದಾಖಲೆ ರಹಿತ ಹಣ, ಮತದಾರರಿಗೆ ಆಮಿಷ ಒಡ್ಡಲು ಸಾಗಿಸುತ್ತಿದ್ದ ಗಿಫ್ಟ್​​ಗಳನ್ನೂ ಕೂಡ ವಶಕ್ಕೆ ಪ್ವೆಯಲಾಗಿದೆ. ಇದರಂತೆ ಕಳೆದ 10 ದಿನದಲ್ಲಿ ಚುನಾವಣಾ ಆಯೋಗ ಬರೊಬ್ಬರಿ 100 ಕೋಟಿ ರೂ. ಅಷ್ಟು ನಗದು ಮತ್ತು ವಸ್ತುಗಳನ್ನು ವಶಪಡಿಸಿಕೊಂಡಿದೆ.

ಮಾರ್ಚ್​​ 29 ರಂದು ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ಅಂದಿನಿಂದ ಇಲ್ಲಿಯವರೆಗು ಒಟ್ಟು 99.18 ಕೋಟಿಯಷ್ಟು ಹಣ ಮತ್ತು ಇನ್ನಿತರ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮುಖ್ಯ ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ. ಮಾದರಿ ನೀತಿ ಸಂಹಿತೆ ಜಾರಿಯಾದ ನಂತರ ಕೇವಲ 10 ದಿನಗಳಲ್ಲಿ 36.8 ಕೋಟಿ ರೂ. ಹಣ, 15.46 ಕೋಟಿ ರೂ. ಬೆಲೆಯ ಉಚಿತ ವಸ್ತುಗಳು, 30 ಕೋಟಿ ರೂ. ಬೆಲೆಯ 5.2 ಲಕ್ಷ ಲೀಟರ್​ ಮದ್ಯ, 15 ಕೋಟಿ ರೂ. ಬೆಲೆಯ ಬಂಗಾರ ಮತ್ತು 2.5 ಕೋಟಿ ರೂ. ಬೆಲೆಯ ಬೆಳ್ಳಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಭಾನುವಾರ ಯಾದಗಿರಿ ಜಿಲ್ಲೆಯಲ್ಲಿ 34 ಲಕ್ಷ ರೂ. ಹಣ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಕ್ಷೇತ್ರದಲ್ಲಿ 21 ಲಕ್ಷ ರೂ. ಮೌಲ್ಯದ 56 ಟಿವಿಗಳನ್ನು ವಶಪಡಿಸಿಕೊಂಡಿದೆ. ಹೀಗೆ ಅಬಕಾರಿ ಇಲಾಖೆಯ ಅಧಿಕಾರಿಗಳು 1.62 ಕೋಟಿ ರೂ ಮೌಲ್ಯದ 54,282 ಲೀಟರ್​​ನಷ್ಟು ಮದ್ಯವನ್ನು ವಶಪಡಿಸಿಕೊಂಡಿದ್ದಾರೆ. ಚುನಾವಣಾ ಆಯೋಗ ಪಾರದರ್ಶಕತೆಗೆ ಒತ್ತು ನೀಡುತ್ತಿದ್ದು, ಸೂಕ್ತ ದಾಖಲೆಗಳಿಲ್ಲದ ನಗದು ಮತ್ತು ಚುನಾವಣೆಯಲ್ಲಿ ಮತದಾರರ ಮೇಲೆ ಪ್ರಭಾವ ಬೀರಲು ಹಂಚಲು ರವಾನಿಸಲಾಗುತ್ತಿದ್ದ ವಸ್ತುಗಳ ಮೇಲೆ ಹದ್ದಿನ ಕಣ್ಣಿಡಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಹೆಚ್ಚಿನ ಸುದ್ದಿ

error: Content is protected !!