ಮ್ಯಾಚೆಂಸ್ಟರ್ : ಯುವ ನಾಯಕ ಶುಭಮನ್ ಗಿಲ್ ನೇತೃತ್ವದ ಟೀಂ ಇಂಡಿಯಾ ಇಂದು ಇಂಗ್ಲೆಂಡ್ ವಿರುದ್ಧದ ನಾಲ್ಕನೇ ಟೆಸ್ಟ್ ಪಂದ್ಯವನ್ನು ಅಡಲಿದ್ದು, ಈ ಪಂದ್ಯದಲ್ಲಿ ಟೀಂ ಇಂಡಿಯಾದ ಮೂವರು ಆಟಗಾರರು ಅಲಭ್ಯರಾಗಿದ್ದಾರೆ.
ಇಂಗ್ಲೆಂಡ್ ನ ಮ್ಯಾಚೆಂಸ್ಟರ್ನ ಓಲ್ಡ್ ಟ್ರಾಫೋರ್ಡ್ ಮೈದಾನದಲ್ಲಿ ನಡೆಯಲಿರುವ ನಾಲ್ಕನೇ ಟೆಸ್ಟ್ ಟೀಂ ಇಂಡಿಯಾಗೆ ಮಹತ್ವದ ಪಂದ್ಯವಾಗಿದೆ. ಇದುವರೆಗೆ ನಡೆದ ಮೂರು ಟೆಸ್ಟ್ ಪಂದ್ಯದಲ್ಲಿ 2 – 1 ಹಿನ್ನಡೆಯಲ್ಲಿರುವ ಭಾರತಕ್ಕೆ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ಪಣತೊಟ್ಟಿದೆ.
ಲಾರ್ಡ್ಸ್‌ನಲ್ಲಿ 3ನೇ ಟೆಸ್ಟ್ ಪಂದ್ಯವನ್ನು ಕೇವಲ 22 ರನ್‌ನಿಂದ ಆಘಾತಕಾರಿ ಸೋಲುಂಡಿರುವ ಶುಭಮನ್ ಗಿಲ್ ಬಳಗವು 4ನೇ ಟೆಸ್ಟ್ ಪಂದ್ಯದಲ್ಲಿ ಪುಟಿದೇಳುವ ವಿಶ್ವಾಸದಲ್ಲಿದೆ. ಮೊದಲ ಪಂದ್ಯವನ್ನು ಇಂಗ್ಲೆಂಡ್ 5 ವಿಕೆಟ್‌ಗಳಿಂದ ಗೆದ್ದುಕೊಂಡಿತು. ಇದಕ್ಕೆ ತಕ್ಕ ಉತ್ತರ ನೀಡಿದ ಭಾರತವು 2ನೇ ಪಂದ್ಯವನ್ನು ಜಯಿಸಿ ಸರಣಿ ಸಮಬಲಗೊಳಿಸಿತು.ಲಾರ್ಡ್ಸ್‌ನಲ್ಲಿ ಮೇಲುಗೈ ಸಾಧಿಸಿರುವ ಬೆನ್ ಸ್ಟೋಕ್ಸ್ ಬಳಗವು ಸರಣಿಯಲ್ಲೀಗ 2 – 1 ರಿಂದ ಮುನ್ನಡೆ ಸಾಧಿಸಿದೆ.
ಈಗಾಗಲೇ ನಾಲ್ಕನೇ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದಲ್ಲಿ ಗಾಯಾಳುಗಳ ಸಮಸ್ಯೆ ಎಚ್ಚಾಗಿದ್ದು, ಈ ಹಿನ್ನಲೆ ತಂಡದಲ್ಲಿ ಭಾರೀ ಬದಲಾವಣೆ ಕಾಣುವ ಸಾಧ್ಯತೆ ಇದೆ ಎನ್ನಲಾಗಿದೆ. ಅಷ್ಟೇ ಅಲ್ಲದೆ ತಂಡದಲ್ಲಿ ಯಾರನ್ನೂ ಆಡಿಸುವುದು ಎಂಬ ಸವಾಲು ಕಾಡುತ್ತಿದೆ.
ಮ್ಯಾಂಚೆಸ್ಟರ್‌ನಲ್ಲಿ ಈ ತನಕ 9 ಪಂದ್ಯಗಳಲ್ಲಿ ಆಡಿರುವ ಭಾರತವು ಇದುವರೆಗೆ ಒಂದು ಪಂದ್ಯವನ್ನು ಗೆದ್ದಿಲ್ಲ.. ಹೀಗಾಗಿ ಈ ಪಂದ್ಯದಲ್ಲಿ ಹೇಗಾದರೂ ಮಾಡಿ ಗೆಲ್ಲಲೇಬೇಕು ಎಂದು ಟೀಂ ಇಂಡಿಯಾ ಪಣತೊಟ್ಟಿದೆ. ಇನ್ನೊಂದೆಡೆ ಮೊಣಕಾಲು ನೋವಿನಿಂದಾಗಿ ಆಲ್‌ರೌಂಡರ್ ನಿತೀಶ್ ರೆಡ್ಡಿ ತಂಡದಿಂದ ಹೊರಬಿದ್ದಿದ್ದು, ಶಾರ್ದುಲ್ ಠಾಕೂರ್ ಆಡುವ ಸಾಧ್ಯತೆಯಿದೆ.
ತಂಡದ ಸ್ಟಾರ್ ವೇಗಿ ಬುಮ್ರಾ ಅವರು ತನ್ನ ಬೆನ್ನುನೋವಿನ ಕಾರಣಕ್ಕೆ ಸರಣಿಯ 3 ಪಂದ್ಯಗಳಲ್ಲಿ ಮಾತ್ರ ಕಣಕ್ಕೆ ಇಳಿಯುತ್ತಾರೆ ಎಂದು ಭಾರತ ತಂಡದ ಕೋಚ್ ಗೌತಮ್ ಗಂಭೀರ್ ಈ ಹಿಂದೆಯೇ ತಿಳಿಸಿದ್ದರು. ಆದರೆ ಒಂದು ವೇಳೆ ಅವರು 4ನೇ ಟೆಸ್ಟ್ ಪಂದ್ಯದ ಆಡುವ 11ರ ಬಳಗದಲ್ಲಿ ಕಾಣಿಸಿಕೊಂಡರೆ, ಐದನೇ ಟೆಸ್ಟ್ ನಲ್ಲಿ ಹೊರಗುಳಿಯುವ ಸಾಧ್ಯತೆ ಇದೆ.
ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಓಲ್ಡ್ ಟ್ರಾಫೋರ್ಡ್‌ನಲ್ಲಿ 9 ಟೆಸ್ಟ್ ಪಂದ್ಯಗಳನ್ನು ಆಡಿವೆ. ಈ ಪೈಕಿ ಭಾರತ ತಂಡವು ಒಂದೂ ಪಂದ್ಯವನ್ನು ಗೆದ್ದಿಲ್ಲ. ನಾಲ್ಕು ಪಂದ್ಯಗಳಲ್ಲಿ ಇಂಗ್ಲೆಂಡ್ ಜಯಭೇರಿ ಬಾರಿಸಿದ್ದರೆ, ಭಾರತವು ಉಳಿದ ಪಂದ್ಯಗಳನ್ನು ಡ್ರಾ ಮಾಡಿಕೊಳ್ಳುವಲ್ಲಿ ಶಕ್ತವಾಗಿತ್ತು.
ಇಂಗ್ಲೆಂಡ್ ವಿರುದ್ಧ ಹೊಸ ಇತಿಹಾಸ ಸೃಷ್ಟಿಸಿದ ಭಾರತೀಯ ಮಹಿಳಾ ತಂಡ.!
ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧ ಮೂರನೇ ಏಕದಿನ ಪಂದ್ಯದಲ್ಲಿ ಭಾರತ ಮಹಿಳೆಯರ ತಂಡ ಭರ್ಜರಿ ಗೆಲುವು ದಾಖಲಿಸುವ ಮೂಲಕ ಸರಣಿಯನ್ನು 2 – 1 ಅಂತರದಿಂದ ವಶಪಡಿಸಿಕೊಂಡಿದೆ. ಈ ಮೂಲಕ ಮೊದಲ ಬಾರಿಗೆ ಮಹಿಳೆಯರ ತಂಡ ಹೊಸ ಇತಿಹಾಸ ನಿರ್ಮಿಸಿದೆ.
ಚೆಸ್ಟರ್-ಲೆ-ಸ್ಟ್ರೀಟ್ನ ರಿವರ್ಸೈಡ್ ಮೈದಾನದಲ್ಲಿ ನಡೆದ ಮೂರನೇ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಟೀಮ್ ಇಂಡಿಯಾ ನಿಗದಿತ 50 ಓವರ್ಗಳಲ್ಲಿ 5 ವಿಕೆಟ್ ಕಳೆದುಕೊಂಡು 318 ರನ್ ಗಳಿಸಿತು. ಈ ಬೃಹತ್ ಗುರಿಯನ್ನು ಬೆನ್ನಟ್ಟಿದ ಇಂಗ್ಲೆಂಡ್ ವನಿತೆಯರ ತಂಡ 49.5 ಓವರ್ಗಳಲ್ಲಿ 305 ರನ್ಗಳಿಗೆ ಇಂಗ್ಲೆಂಡ್ ತಂಡವನ್ನು ಆಲೌಟ್ ಮಾಡಿ 13 ರನ್ಗಳ ಭರ್ಜರಿ ಜಯ ದಾಖಲಿಸಿತು.
ಈ ಗೆಲುವಿನೊಂದಿಗೆ ಭಾರತ ತಂಡವು ಮೂರು ಪಂದ್ಯಗಳ ಏಕದಿನ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ. ಈ ಮೂಲಕ ಇದೇ ಮೊದಲ ಬಾರಿಗೆ ಆಂಗ್ಲರ ನಾಡಿನಲ್ಲಿ ಭಾರತ ಮಹಿಳಾ ತಂಡ ಏಕದಿನ ಹಾಗೂ ಟಿ20 ಸರಣಿ ಗೆದ್ದ ಐತಿಹಾಸಿಕ ಸಾಧನೆ ಮಾಡಿದೆ.
ಇದಕ್ಕೂ ಮುನ್ನ ನಡೆದ 5 ಪಂದ್ಯಗಳ ಟಿ20 ಸರಣಿಯನ್ನು ಟೀಂ ಇಂಡಿಯಾ 3 – 2 ಅಂತರದಿಂದ ಗೆದ್ದುಕೊಂಡಿದ್ದರು. ಇದೀಗ ಏಕದಿನ ಸರಣಿಯಲ್ಲೂ ಆತಿಥೇಯರನ್ನು ಬಗ್ಗು ಬಡಿಯುವಲ್ಲಿ ಭಾರತೀಯ ವನಿತಾ ಪಡೆ ಯಶಸ್ವಿಯಾಗಿದ್ದಾರೆ. ಈ ಮೂಲಕ ಟೀಮ್ ಇಂಡಿಯಾ 49 ವರ್ಷಗಳ ಕಾಯುವಿಕೆಯನ್ನು ಅಂತ್ಯಗೊಳಿಸಿದೆ.