Sunday, July 7, 2024
Homeಕ್ರೀಡೆT20 WORLD CUP: ಟಿ-20 ವಿಶ್ವಕಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಟಾಸ್‌ ಗೆದ್ದ ಭಾರತ

T20 WORLD CUP: ಟಿ-20 ವಿಶ್ವಕಪ್‌ನ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಟಾಸ್‌ ಗೆದ್ದ ಭಾರತ

ವೆಸ್ಟ್‌ಇಂಡೀಸ್‌: ಟಿ-20 ವಿಶ್ವಕಪ್‌ನ (T20 World Cup) ಫೈನಲ್‌ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ ಟಾಸ್‌ ಗೆದ್ದು ಬ್ಯಾಟಿಂಗ್‌ ಆಯ್ದುಕೊಂಡಿದೆ.

ಬಾರ್ಬಡೋಸ್‌ನ ಕೆನ್ಸಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಟಿ 20 ವಿಶ್ವಕಪ್‌ನ ಅಂತಿಮ ಪಂದ್ಯದಲ್ಲಿ 2 ತಂಡಗಳು ಟ್ರೋಫಿಗಾಗಿ ಸೆಣೆಸಾಡುತ್ತಿದೆ. ವಿಶೇಷವೆಂದರೆ ಉಭಯ ತಂಡಗಳು ಈ ಬಾರಿಯ ವಿಶ್ವಕಪ್‌ನಲ್ಲಿ ಸೋಲಿಲ್ಲದ ಸರದಾರರಾಗಿ ಫೈನಲ್‌ಗೆ ಎಂಟ್ರಿ ಕೊಟ್ಟಿದೆ. ಟೀಮ್ ಇಂಡಿಯಾ ಆಡಿರುವ 7 ಪಂದ್ಯಗಳನ್ನು ಗೆದ್ದು, 1 ಪಂದ್ಯ ಫಲಿತಾಂಶವಿಲ್ಲದ್ದಾಗಿದ್ದರೇ, ಅತ್ತ ಸೌತ್ ಆಫ್ರಿಕಾ 8 ಮ್ಯಾಚ್‌ಗಳನ್ನು ಗೆದ್ದು ಅಂತಿಮ ಸುತ್ತಿಗೆ ಪ್ರವೇಶಿಸಿದೆ.

ಈ ವರೆಗೆ ಟಿ 20 ಕ್ರಿಕೆಟ್‌ನಲ್ಲಿ ಭಾರತ ಮತ್ತು ಸೌತ್ ಆಫ್ರಿಕಾ ತಂಡಗಳು 26 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಸೌತ್ ಆಫ್ರಿಕಾ ತಂಡ 11 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಟೀಮ್ ಇಂಡಿಯಾ 14 ಮ್ಯಾಚ್‌ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಒಂದು ಪಂದ್ಯವು ಕಾರಣಾಂತರಗಳಿಂದ ರದ್ದಾಗಿದೆ. ಟಿ20 ವಿಶ್ವಕಪ್‌ನಲ್ಲಿ ಉಭಯ ತಂಡಗಳು ಒಟ್ಟು 6 ಬಾರಿ ಪರಸ್ಪರ ಕಣಕ್ಕಿಳಿದಿದೆ. ಈ ವೇಳೆ ಟೀಮ್ ಇಂಡಿಯಾ 4 ಮ್ಯಾಚ್ ಗಳಲ್ಲಿ ಗೆಲುವು ದಾಖಲಿಸಿದೆ. ಇನ್ನು ಸೌತ್ ಆಫ್ರಿಕಾ ಗೆದ್ದಿರುವುದು ಕೇವಲ 2 ಬಾರಿ ಮಾತ್ರ ಗೆಲುವು ಸಾಧಿಸಿದೆ.

ಭಾರತದ ಪರ:
ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್‌ ಕೀಪರ್‌), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಕುಲದೀಪ್ ಯಾದವ್, ಅರ್ಶ್‌ದೀಪ್ ಸಿಂಗ್

ದಕ್ಷಿಣ ಆಫ್ರಿಕಾದ ಪರ:
ಕ್ವಿಂಟನ್ ಡಿ ಕಾಕ್ (ವಿಕೆಟ್‌ ಕೀಪರ್‌), ರೀಜಾ ಹೆಂಡ್ರಿಕ್ಸ್, ಏಡೆನ್ ಮಾರ್ಕ್ರಾಮ್ (ನಾಯಕ), ಹೆನ್ರಿಚ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಟ್ರಿಸ್ಟಾನ್ ಸ್ಟಬ್ಸ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡ, ಅನ್ರಿಚ್ ನಾರ್ಟ್ಜೆ, ತಬ್ರೈಜ್ ಶಮ್ಸಿ.

ಹೆಚ್ಚಿನ ಸುದ್ದಿ