Sunday, July 7, 2024
Homeಟಾಪ್ ನ್ಯೂಸ್JOB ALERT: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಪದವಿ ವಿದ್ಯಾರ್ಹತೆ

JOB ALERT: ಬ್ಯಾಂಕಿಂಗ್ ಸಿಬ್ಬಂದಿ ನೇಮಕಾತಿ ಸಂಸ್ಥೆಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ: ಪದವಿ ವಿದ್ಯಾರ್ಹತೆ

ಬೆಂಗಳೂರು: ಇನ್ಸುಟಿಟ್ಯೂಟ್​ ಆಫ್​ ಬ್ಯಾಂಕಿಂಗ್​ ಪರ್ಸನಲ್​ ಸೆಲೆಕ್ಷನ್​ (IBPS)ನಿಂದ 6128 ಕ್ಲರಿಕಲ್​ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. ಬ್ಯಾಂಕ್​ ಆಫ್​ ಬರೋಡಾ, ಕೆನರಾ ಬ್ಯಾಂಕ್​, ಯುಕೋ ಬ್ಯಾಂಕ್​, ಇಂಡಿಯನ್​ ಓವರ್​ಸೀಸ್​ ಬ್ಯಾಂಕ್​, ಬ್ಯಾಂಕ್​ ಆಫ್​ ಇಂಡಿ, ಸೆಂಟ್ರಲ್​ ಬ್ಯಾಂಕ್​ ಆಫ್​ ಇಂಡಿಯಾ, ಪಿಎನ್​ಬಿ, ಯುಬಿಐ, ಬ್ಯಾಂಕ್​ ಆಫ್​ ಮಹಾರಾಷ್ಟ್ರ, ಇಂಡಿಯನ್​ ಬ್ಯಾಂಕ್​, ಪಂಜಾಬ್​ ಮತ್ತು ಸಿಂಧ್​​ ಬ್ಯಾಂಕ್​ಗಳಲ್ಲಿ ಈ ನೇಮಕಾತಿ ನಡೆಯಲಿದೆ.

ದೇಶದ ವಿವಿಧ ರಾಜ್ಯಗಳ ಖಾಲಿ ಇರುವ ಸ್ಥಾನಗಳಿಗೆ ಅನುಸಾರವಾಗಿ ಈ ಹುದ್ದೆ ಭರ್ತಿ ನಡೆಯಲಿದ್ದು, ಕರ್ನಾಟಕದಲ್ಲಿ 457 ಪೋಸ್ಟ್​​ ಅನ್ನು ನಿಗದಿಸಲಾಗಿದೆ.

ವಿದ್ಯಾರ್ಹತೆ: ಅಭ್ಯರ್ಥಿಗಳು ಯಾವುದೇ ವಿಷಯದಲ್ಲಿ ಪದವಿಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ: ಈ ಹುದ್ದೆಗಳಿಗೆ ಅಭ್ಯರ್ಥಿಗಳು ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ ಪೂರ್ಣಗೊಳಿಸಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪ.ಜಾ, ಪ.ಪಂ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆ ಮಾಡಲಾಗಿದೆ.

ಅರ್ಜಿ ಸಲ್ಲಿಕೆ: ಅಭ್ಯರ್ಥಿಗಳು ಆನ್​ಲೈನ್​ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ಪ.ಜಾ, ಪ.ಪಂ, ವಿಕಲಚೇತನ, ಇಎಸ್​ಎಂ ಅಭ್ಯರ್ಥಿಗಳಿಗೆ 175 ರೂ, ಇತರೆ ಅಭ್ಯರ್ಥಿಗಳಿಗೆ 850 ರೂ. ಅರ್ಜಿ ಶುಲ್ಕ ನಿಗದಿಸಲಾಗಿದೆ.

ಆಯ್ಕೆ ಪ್ರಕ್ರಿಯೆ: ಈ ಹುದ್ದೆಗಳಿಗೆ ಪ್ರೀಲಿಮ್ಸ್​ ಮತ್ತು ಮುಖ್ಯ ಪರೀಕ್ಷೆ ಮೂಲಕ ಆಯ್ಕೆ ನಡೆಯಲಿದೆ. ಬಳಿಕ ದಾಖಲಾತಿ ಪರಿಶೀಲನೆ ಮತ್ತು ವೈದ್ಯಕೀಯ ಪರೀಕ್ಷೆ ಇರಲಿದೆ.

ಈ ಹುದ್ದೆಗಳಿಗೆ ಜುಲೈ 1 ರಿಂದ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಪ್ರಾರಂಭವಾಗಿದ್ದು, ಅರ್ಜಿ ಸಲ್ಲಿಕೆಗೆ ಕಡೆಯ ದಿನ ಜುಲೈ 21 ಆಗಿದೆ.

ಈ ಹುದ್ದೆ ಕುರಿತ ಹೆಚ್ಚಿನ ಮಾಹಿತಿ ಮತ್ತು ಅಧಿಕೃತ ಅಧಿಸೂಚನೆಗೆ ಅಭ್ಯರ್ಥಿಗಳು ibps.in ಇಲ್ಲಿಗೆ ಭೇಟಿ ನೀಡಿ.

ಹೆಚ್ಚಿನ ಸುದ್ದಿ