ಬೆಂಗಳೂರು : ಪೋಕ್ಸೋ ಪ್ರಕರಣದಲ್ಲಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಬಿಗ್ ರಿಲೀಫ್ ದೊರತಿದೆ. ಪ್ರಕರಣದಲ್ಲಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಧ್ಯಂತರ ಜಾಮೀನು ನೀಡಿ ಹೈಕೋರ್ಟ್ ಆದೇಶ ಹೊರಡಿಸಿದೆ.
ಬಿ ಎಸ್ ಯಡಿಯೂರಪ್ಪ ಅವರ ವಿರುದ್ಧ ದಾಖಲಾಗಿದ್ದ ಪೋಕ್ಸೋ ಪ್ರಕರಣವನ್ನು ರದ್ದು ಕೋರಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇದೀಗ ವಾದ-ಪ್ರತಿವಾದ ಆಲಿಸಿದ ನ್ಯಾ. ಪ್ರದೀಪ್ ಸಿಂಗ್ ಯೆರೂರ್ ಅವರ ಪೀಠವು, ಕಾಗ್ನಿಜೆನ್ಸ್ ಮತ್ತು ಸಮನ್ಸ್ ಆದೇಶಕ್ಕೆ ತಡೆ ನೀಡಿದೆ.
ಅಷ್ಟೇ ಅಲ್ಲದೆ ವಿಚಾರಣೆಗೆ ಖುದ್ದಾಗಿ ಹಾಜರಾಗುವುದರಿಂದಲೂ ಬಿ.ಎಸ್. ಯಡಿಯೂರಪ್ಪನವರಿಗೆ ವಿನಾಯಿತಿ ನೀಡಿ ಆದೇಶ ಹೊರಡಿಸಿದೆ. ಅಲ್ಲದೇ ಅವರ ವಿರುದ್ದ ಯಾವುದೇ ಬಲವಂತರ ಕ್ರಮ ಕೈಗೊಳ್ಳದಂತೆ ಈ ಹಿಂದೆಯೇ ಹೈಕೋರ್ಟ್ ಆದೇಶ ನೀಡಿತ್ತು.