ಬೆಂಗಳೂರು : ಐಪಿಎಲ್ ನಲ್ಲಿ (IPL) ಆರ್ಸಿಬಿ (Rcb) ಅಭಿಮಾನಿಗಳಿಗೆ ಶಾಕ್ ಎದುರಾಗಿದ್ದು, ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಪಂದ್ಯಗಳು ಆಯೋಜನೆಗೊಳ್ಳೋದು ಸಂದೇಹವಾಗಿದೆ.
ಮಧ್ಯಪ್ರದೇಶದ ಇಂದೋರ್ (Indore) ಅಥವಾ ಛತ್ತೀಸ್‌ಗಢದ ರಾಯ್‌ಪುರದಲ್ಲಿ(Raipur) ತವರಿನ ಪಂದ್ಯ ನಡೆಯುವ ಸಾಧ್ಯತೆಯಿದೆ.
ಆರ್‌ಸಿಬಿ ಚಾಂಪಿಯನ್ ಬಳಿಕ ಕಾಲ್ತುಳಿತ ಸಂಭವಿಸಿ 11 ಮಂದಿ ಸಾವನ್ನಪ್ಪಿದ ಬಳಿಕ ಚಿನ್ನಸ್ವಾಮಿಯಲ್ಲಿ ಸುರಕ್ಷತೆ ಪ್ರಶ್ನೆ ಎದ್ದಿದೆ. ಈ ಬಾರಿಯ ಐಪಿಎಲ್ ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸುವ ಬಗ್ಗೆ KSCA ಉತ್ಸುಕವಾಗಿದ್ದು, ಆದ್ರೆ, ಆರ್ಸಿಬಿ ಮ್ಯಾನೇಜ್ಮೆಂಟ್ ಇಲ್ಲಿಯವರೆಗೂ KSCA ಸಂಪರ್ಕಿಸಿಲ್ಲ. ಹೀಗಾಗಿಯೇ ಬೆಂಗಳೂರಲ್ಲಿ ಮ್ಯಾಚ್ ಗಳು ನಡೆಯೋದು ಡೌಟ್ ಎನ್ನಲಾಗಿದೆ.
ಮಹಾರಾಷ್ಟ್ರದ ಪುಣೆಗೆ ಆರ್‌ಸಿಬಿ ಪಂದ್ಯಗಳು ಸ್ಥಳಾಂತರವಾಗಲಿದೆ ಎಂಬ ವರದಿಯಾಗಿತ್ತು. ಆದರೆ ಈಗ ರಾಜಸ್ಥಾನ ರಾಯಲ್ಸ್ ಪಂದ್ಯಗಳು ಪುಣೆಯಲ್ಲಿ ನಡೆಯಲಿದೆ.ಛತ್ತೀಸ್‌ಗಢದ ರಾಯ್‌ಪುರ ಆರ್‌ಸಿಬಿಯ ಹೊಸ ತವರು ಆಗಲು ಮುಂಚೂಣಿಯಲ್ಲಿದ್ದು ಮಧ್ಯಪ್ರದೇಶದ ಇಂದೋರ್ ಕೂಡ ರೇಸ್‌ನಲ್ಲಿದೆ.
ಸದ್ಯ ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಅಂಬುಲೆನ್ಸ್ ಓಡಾಟಕ್ಕೆ ಜಾಗ, ಪಾರ್ಕಿಂಗ್ ವ್ಯವಸ್ಥೆ, ತುರ್ತು ನಿರ್ಗಮನ, ಅಗಲವಾದ ಗೇಟ್‌ಗಳು, ಮಹಿಳೆಯರಿಗೆ ಪ್ರತ್ಯೇಕ ಮಾರ್ಗ ಸೇರಿ ಎಲ್ಲಾ ಮಾರ್ಗಸೂಚಿಗಳನ್ನು ಸರಿಪಡಿಸುವ ಕೆಲಸ ನಡೆಯುತ್ತಿದೆ. ಮಾರ್ಚ್ ಮೂರನೇ ವಾರ ಐಪಿಎಲ್ ಪಂದ್ಯಗಳು ಆರಂಭವಾಗಲಿದೆ.
ಇದನ್ನೂ ಓದಿ : ಖಿನ್ನತೆ, ಆತಂಕಗಳಿಂದ ಅಶ್ಲೀಲ ವಿಡಿಯೋ ವೀಕ್ಷಣೆ – ಅಪಾಯಕಾರಿ ಅಭ್ಯಾಸಕ್ಕೆ ಯುವಕರೇ ಹೆಚ್ಚು ಬಲಿ.!