ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಇದರ ವಿರುದ್ಧದ ಹೋರಾಟದಲ್ಲಿ ಜೈಲು ಪಾಲಾಗಿರುವ ಹಿಂದೂ ಸನ್ಯಾಸಿ ಚಿನ್ಮಯ್ ಕೃಷ್ಣ ದಾಸ್ ಅವರ ಬೆನ್ನಿಗೆ ಇಸ್ಕಾನ್ ಸಂಸ್ಥೆ ನಿಂತಿದೆ. ಚಿನ್ಮಯ್ ಕೃಷ್ಣ ದಾಸ್ ಅವರಿಗೆ ಅಗತ್ಯವಾದ ಎಲ್ಲಾ ರೀತಿಯ ನೆರವು ನೀಡಲು ತಾವು ಬದ್ಧ ಎಂದು ಇಸ್ಕಾನ್ ಸಂಸ್ಥೆ ಹೇಳಿದೆ.
Clarifying ISKCON's position and support for religious rights in Bangladesh pic.twitter.com/dtP6Qu0NoR
— ISKCON (@iskcon) November 28, 2024
ಚಿನೋಯ್ ಕೃಷ್ಣ ದಾಸ್ ಬಂಧನದ ನಂತರ ಅವರಿಂದ ಇಸ್ಕಾನ್ ಸಂಸ್ಥೆ ಅಂತರ ಕಾಯ್ದುಕೊಂಡಿದೆ ಎಂಬ ಆರೋಪ ಕೇಳಿಬಂದಿತ್ತು. ಆದ್ರೆ ಇದಕ್ಕೆ ಸ್ಪಷ್ಟನೆ ನೀಡಿರುವ ಇಸ್ಕಾನ್, ಯಾವುದೇ ಕಾರಣಕ್ಕೂ ನಾವು ಅವರಿಂದ ಅಂತರ ಕಾಯ್ದುಕೊಂಡಿಲ್ಲ. ಚಿನ್ಮಯ್ ದಾಸ್ ಗೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಾನೂನಿನ ನೆರವು ಸೇರಿದಂತೆ ಎಲ್ಲಾ ರೀತಿಯ ಸಹಾಯಕ್ಕೆ ಬದ್ಧ ಎಂದು ಇಸ್ಕಾನ್ ಸ್ಪಷ್ಟಪಡಿಸಿದೆ.
ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ಹಿಂದೂಗಳ ಮೇಲಿನ ದೌರ್ಜನ್ಯವನ್ನು ವಿರೋಧಿಸಿ ಚಿತ್ತಗಾಂಗ್ನಲ್ಲಿ ಆಯೋಜಿಸಲಾಗಿದ್ದ ರ್ಯಾಲಿಯಲ್ಲಿ ರಾಷ್ಟ್ರಧ್ವಜಕ್ಕೆ ಅಗೌರವ ತೋರಿದ ಆರೋಪದ ಮೇಲೆ ಚಿನೋಯ್ ದಾಸ್ ಬಂಧಿಸಲಾಗಿತ್ತು.