Wednesday, August 19, 2026
Homeಕ್ರೈಂISRO : ಇಸ್ರೋ ಆವರಣದಲ್ಲಿ ಡ್ರೋಣ್ ಹಾರಾಟ - ಆರೋಪಿ ವಿರುದ್ಧ ಎಫ್‌ಐಆರ್!

ISRO : ಇಸ್ರೋ ಆವರಣದಲ್ಲಿ ಡ್ರೋಣ್ ಹಾರಾಟ – ಆರೋಪಿ ವಿರುದ್ಧ ಎಫ್‌ಐಆರ್!

ಬೆಂಗಳೂರು: ಬೆಂಗಳೂರಿನ (Bengaluru ) ಪೀಣ್ಯದಲ್ಲಿರುವ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ISRO) ಟೆಲಿಮೆಟ್ರಿ ಟ್ರ್ಯಾಕಿಂಗ್ ಮತ್ತು ಕಮಾಂಡ್ ನೆಟ್‌ವರ್ಕ್ (ISTRAC) ಕೇಂದ್ರದ ಆವರಣದಲ್ಲಿ ಅನಧಿಕೃತವಾಗಿ ಡ್ರೋನ್ (Drone ) ಹಾರಾಟ ನಡೆಸಿದ ಘಟನೆ ವರದಿಯಾಗಿದೆ.

ಈ ಸಂಬಂಧ ಭದ್ರತಾ ನಿಯಮಗಳ ಉಲ್ಲಂಘನೆಗಾಗಿ ಓರ್ವ ವ್ಯಕ್ತಿಯ ವಿರುದ್ಧ ಪೀಣ್ಯ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ.

ಇಸ್ರೋ ಕೇಂದ್ರವು ದೇಶದ ಅತ್ಯಂತ ಸುರಕ್ಷಿತ ಮತ್ತು ನಿರ್ಬಂಧಿತ ವಲಯಗಳಲ್ಲಿ ಒಂದಾಗಿದ್ದು, ಅನುಮತಿಯಿಲ್ಲದೆ ಇಲ್ಲಿ ಡ್ರೋನ್ ಹಾರಿಸುವುದು ಗಂಭೀರ ಭದ್ರತಾ ಲೋಪವೆಂದು ಪರಿಗಣಿಸಲಾಗಿದೆ.

ಇಸ್ರೋ ಆವರಣದ ಮೇಲೆ ಡ್ರೋನ್ ಹಾರಾಡುತ್ತಿರುವುದನ್ನು ಗಮನಿಸಿದ ಭದ್ರತಾ ಸಿಬ್ಬಂದಿ ತಕ್ಷಣ ಕಾರ್ಯಪ್ರವೃತ್ತರಾಗಿ ಡ್ರೋನ್ ಅನ್ನು ವಶಪಡಿಸಿಕೊಂಡಿದ್ದಾರೆ.

ಈ ಬಗ್ಗೆ ಇಸ್ರೋ ಅಧಿಕಾರಿಗಳು ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

ಆರೋಪಿ ವ್ಯಕ್ತಿಯು ಯಾವುದೇ ಪೂರ್ವಾನುಮತಿ ಪಡೆಯದೆ ಚಿತ್ರೀಕರಣಕ್ಕಾಗಿ ಅಥವಾ ಹವ್ಯಾಸಕ್ಕಾಗಿ ಡ್ರೋನ್ ಬಳಸಿದ್ದ ಎನ್ನಲಾಗಿದೆ.

ನಗರದ ಪ್ರಮುಖ ಸರ್ಕಾರಿ ಕಚೇರಿಗಳು ಮತ್ತು ರಕ್ಷಣಾ ಸಂಶೋಧನಾ ಸಂಸ್ಥೆಗಳ ಸುತ್ತಮುತ್ತ ‘ನೋ ಫ್ಲೈ ಝೋನ್’ ನಿಯಮಗಳು ಜಾರಿಯಲ್ಲಿರುತ್ತವೆ. ಇಂತಹ ಪ್ರದೇಶಗಳಲ್ಲಿ ಡ್ರೋನ್ ಬಳಸುವ ಮೊದಲು ನಾಗರಿಕ ವಿಮಾನಯಾನ ನಿರ್ದೇಶನಾಲಯ (DGCA) ಹಾಗೂ ಸ್ಥಳೀಯ ಪೊಲೀಸರಿಂದ ಕಡ್ಡಾಯವಾಗಿ ಅನುಮತಿ ಪಡೆಯಬೇಕಾಗುತ್ತದೆ. ಸದ್ಯ ಪೊಲೀಸರು ಡ್ರೋನ್‌ನಲ್ಲಿದ್ದ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದು, ತನಿಖೆ ಮುಂದುವರಿಸಿದ್ದಾರೆ.

ಇದನ್ನೂ ಓದಿ : ಸಾಕ್ಷರರ ನಾಡಿನ ಯುವಕರಿಂದ ಬೆಂಗಳೂರಿನಲ್ಲಿ ಡ್ರಗ್ಸ್‌ ದಂಧೆ – 14 ಕೋಟ್ ಮೌಲ್ಯದ ಮಾಲು ವಶ! 

ಹೆಚ್ಚಿನ ಸುದ್ದಿ

Change Language »
error: Content is protected !!