ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕೆಲವೇ ಕೆಲವು ದಿನಗಳು ಉಳಿದಿದ್ದು, ಜೆಡಿಎಸ್ ಪಕ್ಷದ ಹಾಸನ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಇನ್ನು ಕಗ್ಗಂಟಾಗಿಯೇ ಉಳಿದಿದೆ. ಈ ಹಿನ್ನೆಲೆ ಗೊಂದಲ ಪರಿಹಾರಕ್ಕೆ ಮಾಜಿ ಪ್ರಧಾನಿ ದೇವೇಗೌಡರು ಮುಂದಡಿ ಇಟ್ಟಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಸ್ವತಃ ದೇವೇಗೌಡರು ಹಾಸನ ಕ್ಷೇತ್ರದ ಮುಖಂಡರ ಸಭೆ ಕರೆ ಕರೆದಿದ್ದು, ಟಿಕೆಟ್ ಆಯ್ಕೆ ವಿಚಾರವಾಗಿ ಎಲ್ಲ ಗೊಂದಲಗಳಿಗೆ ಪರಿಹಾರ ಹುಡುಕುತ್ತಿದ್ದಾರೆ,
ಈ ಸಭೆಯಲ್ಲಿ ಹಾಸನ ಕ್ಷೇತ್ರದ ನಗರ ಮತ್ತು ಗ್ರಾಮಾಂತರ ಭಾಗದ ನಾಯಕರು ಭಾಗಿಯಾಗಿದ್ದಾರೆ. ಸಭೆಯಲ್ಲಿ ಯಾರಿಗೆ ಟಿಕೆಟ್ ನೀಡಿದರೆ ಚುನಾವಣೆಯಲ್ಲಿ ಗೆಲುವು ಸಾಧ್ಯ ಎಂಬ ಬಗ್ಗೆ ಚರ್ಚೆ ನಡೆಯುತ್ತಿದ್ದು, ಸೂಕ್ತ ಅಭ್ಯರ್ಥಿಯನ್ನು ಗುರುತಿಸಿ ಕಣಕ್ಕಿಳಿಸುವ ಬಗ್ಗೆ ದೇವೇಗೌಡರು ಮುಖಂಡರ ಅಭಿಪ್ರಾಯ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಭವಾನಿ ರೇವಣ್ಣ,, ಸ್ವರೂಪ ಮಧ್ಯೆ ಟಿಕೆಟ್ ಗಾಗಿ ನಡೆಯುತ್ತಿರುವ ಬಿಗ್ ಫೈಟ್ ನಡೆಯುತ್ತಿದ್ದು, ಟಿಕೆಟ್ ಫೈಟ್ ಕಾರಣಕ್ಕೆ ಕ್ಷೇತ್ರ ಕಳೆದುಕೊಳ್ಳುವ ಆತಂಕದಲ್ಲಿ ಜೆಡಿಎಸ್ ನಾಯಕರಿದ್ದಾರೆ. ಹಾಗಾಗಿ ಸಮಸ್ಯೆ ಪರಿಹಾರಕ್ಕೆ ಹಾಸನ ಕ್ಷೇತ್ರದ ನಿಷ್ಠಾವಂತ ಮುಖಂಡರು ದೇವೆಗೌಡರ ಮೊರೆ ಹೋಗಿದ್ದಾರೆ ಎನ್ನಲಾಗುತ್ತಿದೆ.