Wednesday, February 19, 2025
Homeಟಾಪ್ ನ್ಯೂಸ್ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಗ್ಯಾಸ್ ಸಿಲಿಂಡರ್‌ಗೆ 50% ಸಬ್ಸಿಡಿ

ಜೆಡಿಎಸ್ ಅಧಿಕಾರಕ್ಕೆ ಬಂದ್ರೆ ಗ್ಯಾಸ್ ಸಿಲಿಂಡರ್‌ಗೆ 50% ಸಬ್ಸಿಡಿ

ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಜೆಡಿಎಸ್ ಸರಕಾರ ಅಧಿಕಾರಕ್ಕೆ ಬಂದರೆ ಅಡುಗೆ ಅನಿಲ ಸಿಲಿಂಡರ್ ಗೆ ಶೇ.50ರಷ್ಟು ಸಬ್ಸಿಡಿ ನೀಡುವ ಭರವಸೆ ನೀಡಿದ್ದಾರೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ.

ಯಶವಂತಪುರ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ವೇಳೆ ಮಾತನಾಡಿ, ಕೇಂದ್ರ ಸರಕಾರ ಪುಕ್ಕಟ್ಟೆ ಗ್ಯಾಸ್ ನೀಡುವುದಾಗಿ ಹೇಳಿ ಉಜ್ವಲ ಯೋಜನೆಯನ್ನು ಜಾರಿಗೆ ತಂದಿದೆ. ಇದನ್ನು ನಂಬಿದ ಮಹಿಳೆಯರಿಗೆ ಒಂದು ಸಿಲಿಂಡರ್ ಕೊಟ್ಟ ಮೇಲೆ ಬೆಲೆ ಏರಿಕೆಯ ಶಾಕ್ ನೀಡಿತು. ಈಗ ಸಿಲಿಂಡರ್ ಬೆಲೆ ಸಾವಿರ ರೂಪಾಯಿ ದಾಟಿದ್ದು, ಬಡಜನರು ಜೀವನ ಸಾಗಿಸುವುದೇ ದುಸ್ತರವಾಗಿದೆ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.

ನಮ್ಮಲ್ಲಿ ಅಡುಗೆ ಅನಿಲ ರಿಯಾಯಿತಿ ಒಂದೇ ಯೋಜನೆ ಅಲ್ಲ, ಇನ್ನೂ ಹಲವಾರು ಯೋಜನೆಗಳು ಇವೆ. ವರ್ಷಕ್ಕೆ ಐದು ಸಿಲಿಂಡರ್ ಉಚಿತವಾಗಿ ಸಿಗಲಿವೆ. 10 ಸಿಲಿಂಡರ್ ಗೆ ಅರ್ಧ ಹಣ ಪಡೆಯಲಿದ್ದೇವೆ. ಇನ್ನು ಆಟೋ ಚಾಲಕರಿಗೆ  ಪ್ರತಿ ತಿಂಗಳು ಎರಡು ಸಾವಿರ ರೂಪಾಯಿ ಕೊಡಲಾಗುವುದು. ಹಾಗೆಯೇ, ಅಂಗನವಾಡಿ ಕಾರ್ಯಕರ್ತರ ಬೇಡಿಕೆಗಳನ್ನ ಈಡೇರಿಸುವ ಕೆಲಸ ಮಾಡುತ್ತೇವೆ ಎಂದ್ರು.

ಹೆಚ್ಚಿನ ಸುದ್ದಿ

error: Content is protected !!