Sunday, July 7, 2024
Homeಟಾಪ್ ನ್ಯೂಸ್BREAKING: ಸೂರಜ್‌ ರೇವಣ್ಣಗೆ ನ್ಯಾಯಾಂಗ ಬಂಧನ

BREAKING: ಸೂರಜ್‌ ರೇವಣ್ಣಗೆ ನ್ಯಾಯಾಂಗ ಬಂಧನ

ಬೆಂಗಳೂರು: ಅಸಹಜ ಲೈಂಗಿಕ ಪ್ರಕರಣಕ್ಕೆ ಸಂಬಂಧಿಸಿ ಎಂಎಲ್‌ಸಿ ಸೂರಜ್‌ ರೇವಣ್ಣಗೆ (Suraj Revanna) ನ್ಯಾಯಾಂಗ ಬಂಧನಕ್ಕೆ ಕೋರ್ಟ್‌ ಆದೇಶ ನೀಡಿದೆ.

ಅಸಹಜ ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣದಡಿ ಬಂಧಿತರಾಗಿರುವ ಸೂರಜ್ ರೇವಣ್ಣ ಅವರ ಎಸ್ಐಟಿ (SIT) ಕಸ್ಟಡಿ ಇಂದು ಅಂತ್ಯವಾಗಿದೆ. ಈ ಹಿನ್ನೆಲೆಯಲ್ಲಿ 42ನೇ ACMM ಕೋರ್ಟ್‌ನಲ್ಲಿ ವಿಚಾರಣೆ ನಡೆದಿದೆ.

ಈ ವೇಳೆ ಸೂರಜ್‌ ರೇವಣ್ಣಗೆ ಜುಲೈ 18ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶ ನೀಡಿದೆ. ನಾಳೆಗೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಮಾಡಿದೆ. ನಾಳೆಯೇ ಆಕ್ಷೇಪಣೆ ಸಲ್ಲಿಕೆ ಮಾಡುವಂತೆ ಸಿಐಡಿ ಅಧಿಕಾರಿಗಳಿಗೆ ಕೋರ್ಟ್‌ ಸೂಚನೆ ನೀಡಲಾಗಿದೆ.

ಹೆಚ್ಚಿನ ಸುದ್ದಿ