ಚಿಕ್ಕಮಗಳೂರು: ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಪ್ರಕಟಿಸಿದ್ದು, ಜಿಲ್ಲೆಯ ಕಡೂರು ವಿಧಾನಸಭಾ ಕ್ಷೇತ್ರದಿಂದ ಕೆ.ಎಸ್.ಆನಂದ್ ಅವರಿಗೆ ಟಿಕೆಟ್ ಘೋಷಿಸಿದೆ. ಜೆಡಿಎಸ್ ತೊರೆದು ಈಚೆಗೆ ಕಾಂಗ್ರೆಸ್ ಸೇರಿದ್ದ ವೈಎಸ್‌ವಿ ದತ್ತ ಅವರಿಗೆ ಟಿಕೆಟ್ ಕೈತಪ್ಪಿದೆ.
ಕೆ.ಎಸ್. ಆನಂದ್ ಕಳೆದ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದಲೇ ಸ್ಪರ್ಧಿಸಿ ಸೋಲುಂಡಿದ್ದರು. ಟಿಕೆಟ್‌ಗಾಗಿ ಆನಂದ್ ಸಹಿತ ಏಳು ಮಂದಿ ಅರ್ಜಿ ಸಲ್ಲಿಸಿದ್ದರು. ವೈಎಸ್‌ವಿ ದತ್ತ ಅವರೂ ಪ್ರಬಲ ಆಕಾಂಕ್ಷಿಯಾಗಿದ್ದರು.
ತರೀಕೆರೆ, ಚಿಕ್ಕಮಗಳೂರು, ಮೂಡಿಗೆರೆ ಕ್ಷೇತ್ರಗಳ ಟಿಕೆಟ್ ಘೋಷಣೆ ಬಾಕಿ ಇದೆ. ಈ ಮೂರೂ ಕ್ಷೇತ್ರಗಳಲ್ಲಿ ಟಿಕೆಟ್‌ಗಾಗಿ ತೀವ್ರ ಕಸರತ್ತು ನಡೆದಿದೆ.