Monday, January 20, 2025
Homeಟಾಪ್ ನ್ಯೂಸ್ಕಾಂಗ್ರೆಸ್ ಹೈಕಮಾಂಡ್‌ಗೆ ಶಾಸಕ ರಮೇಶ್‌ಕುಮಾರ್ ಎಚ್ಚರಿಕೆ!

ಕಾಂಗ್ರೆಸ್ ಹೈಕಮಾಂಡ್‌ಗೆ ಶಾಸಕ ರಮೇಶ್‌ಕುಮಾರ್ ಎಚ್ಚರಿಕೆ!

ಕೋಲಾರ: ಸಿದ್ದರಾಮಯ್ಯ ಕ್ಯಾಂಪ್‌ನ ಪ್ರಮುಖ ಪ್ಲೇಯರ್ ಮಾಜಿ ಸ್ಪೀಕರ್ ರಮೇಶ್‌ಕುಮಾರ್ ಸಿದ್ದರಾಮಯ್ಯ ಪರ ಬ್ಯಾಟ್‌ ಬೀಸಿದ್ದಾರೆ. ಕರ್ನಾಟಕ ರಾಜ್ಯದಲ್ಲಿ ಸಿದ್ದರಾಮಯ್ಯ ಮುನಿಸಿಕೊಂಡು ಪಕ್ಕಕ್ಕೆ ಹೋದರೆ ಆಂಧ್ರ ಪ್ರದೇಶದಲ್ಲಿ ಕಾಂಗ್ರೆಸ್‌ಗೆ ‌ಬಂದ ಗತಿಯೇ ಇಲ್ಲಿಯೂ ಬರುತ್ತದೆ ಎಂದು ಮಾಜಿ ಸ್ಪೀಕರ್ ರಮೇಶ್​ ಕುಮಾರ್ ಎಚ್ಚರಿಕೆ ನೀಡಿದ್ದಾರೆ.

ರಮೇಶ್‌ಕುಮಾರ್ ಶ್ರೀನಿವಾಸಪುರ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಾ, ಸಿದ್ದರಾಮಯ್ಯರನ್ನು ಕಡೆಗಣಿಸಿದ್ರೆ ಕಾಂಗ್ರೆಸ್ ಸಮಸ್ಯೆ ಎದುರಿಸುತ್ತೆ ಎಂಬ ಮಾತುಗಳನ್ನಾಡಿದ್ದಾರೆ. ಅವರ ಈ ಮಾತುಗಳನ್ನು ಕೇಳಿದ್ರೆ ಸಿದ್ದರಾಮಯ್ಯರನ್ನು ಮೂಲೆಗುಂಪು ಮಾಡಲಾಗುತ್ತಿದೆಯಾ ಎಂಬ ಅನುಮಾನ ಕಾಡಲಾರಂಭಿಸಿದೆ.

ಹೆಚ್ಚಿನ ಸುದ್ದಿ

error: Content is protected !!