ಕಾಂಗ್ರೆಸ್ ನಲ್ಲಿ ಮೂಲ vs ವಲಸಿಗ ಕಿತ್ತಾಟಕ್ಕೆ ಒಂದು ಟಿಕೆಟ್ ಹೋಗಿದೆ. ತುಮಕೂರಿನ ಗುಬ್ಬಿ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದ ಜಿಎಸ್ ಪ್ರಸನ್ನಕುಮಾರ್ ರನ್ನು ಕಾಂಗ್ರೆಸ್ ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ.
ಪಕ್ಷ ವಿರೋಧಿ ಚಟುವಟಿಕೆಯಲ್ಲಿ ತೊಡಗಿಸಿದಕ್ಕೆ ಉಚ್ಛಾಟನೆ ಮಾಡಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಘಟಕದ ಅಧ್ಯಕ್ಷ ಚಂದ್ರಶೇಖರ್ ಗೌಡ ಮಾಹಿತಿ ನೀಡಿದ್ದಾರೆ.
ಶಾಸಕ ಎಸ್‌ಆರ್ ಶ್ರೀನಿವಾಸ್ ಅವರು ಕಾಂಗ್ರೆಸ್ ಸೇರ್ಪಡೆಯಾಗುವುದನ್ನು ಪ್ರಸನ್ನಕುಮಾರ್ ಪ್ರಬಲವಾಗಿ ವಿರೋಧಿಸಿದ್ದರು. ಅಲ್ಲದೇ ತಾವೇ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಎಂದು ಚುನಾವಣಾ ಪ್ರಚಾರ ನಡೆಸಲು ಆರಂಭಿಸಿದ್ದರು.
ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ಭಾಗಿಯಾಗುತ್ತಿರುವ ಆರೋಪದಡಿಯಲ್ಲಿ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹಾಗೂ ವರಿಷ್ಠರ ಅನುಮೋದನೆಯ ಮೇರೆಗೆ ಪ್ರಸನ್ನಕುಮಾರ್ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ ಎಂದು ಚಂದ್ರಶೇಖರ್ ತಿಳಿಸಿದ್ದಾರೆ.