Saturday, January 25, 2025
Homeಟಾಪ್ ನ್ಯೂಸ್ರಾಜ್ಯದ ಮತದಾರರು ಎಷ್ಟು? ಇಲ್ಲಿದೆ ಅಂಕಿ ಅಂಶ

ರಾಜ್ಯದ ಮತದಾರರು ಎಷ್ಟು? ಇಲ್ಲಿದೆ ಅಂಕಿ ಅಂಶ

ರಾಜ್ಯ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಿದ್ದು, ಮೇ 10 ರಂದು ರಾಜ್ಯಾದ್ಯಂತ ಚುನಾವಣೆ ನಡೆಯಲಿದೆ.

ಈ ಬಾರಿಯ ಚುನಾವಣೆಗೆ ರಾಜ್ಯದಲ್ಲಿ 5.22 ಕೋಟಿ ಮತದಾರರರಿದ್ದು, ಅದರಲ್ಲಿ 2,62,42,561 ಪುರುಷ ಮತದಾರರು ಹಾಗೂ 2,59,26,319 ಮತದಾರರು ಮಹಿಳೆಯರಾಗಿದ್ದಾರೆ. 4,699 ತೃತೀಯ ಲಿಂಗಿ ಮತದಾರರು ಇದ್ದಾರೆ.

ಇದರಲ್ಲಿ 9,17,241 ಮೊದಲ ಬಾರಿ ಮತದಾರರಾಗಿದ್ದು, 80 ವರ್ಷ ಮೇಲ್ಪಟ್ಟ 12,15,763 ಮತದಾರರು ಇದ್ದಾರೆ. 5,55,073 ದಿವ್ಯಾಂಗ ಮತದಾರರಿದ್ದಾರೆ.   80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದಲೇ ಮತದಾನ ಮಾಡಲು ಅವಕಾಶ ಕಲ್ಪಿಸಲಾಗಿದೆ.

ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ.   

ಯುವಕರಿಗಾಗಿ 224 ಪ್ರತ್ಯೇಕ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಅದರಲ್ಲಿ ಯುವ ಅಧಿಕಾರಿಗಳನ್ನು ನೇಮಿಸಲಾಗುತ್ತದೆ, ಮಹಿಳೆಯರಿಗಾಗಿ 1320 ಮತಗಟ್ಟೆಗಳನ್ನು ಮೀಸಲಿಟ್ಟಿದ್ದು, ಅದರಲ್ಲಿ ಸಂಪೂರ್ಣ ಮಹಿಳಾ ಅಧಿಕಾರಿಗಳನ್ನೇನಿಯೋಜಿಸಲಾಗುತ್ತದೆ ಎಂದು ಚುನಾವಣಾ ಆಯೋಗ ತಿಳಿಸಿದೆ.

ಹೆಚ್ಚಿನ ಸುದ್ದಿ

error: Content is protected !!