ಕರ್ನಾಟಕ ಚುನಾವಣಾ ಆಯೋಗವು 2023 ರ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಘೋಷಿಸಿದೆ. ಕರ್ನಾಟಕದಲ್ಲಿ ಎಲ್ಲ 224 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಚುನಾವಣೆ ನಡೆಯಲಿದೆ.
ಮೇ 10 ಕ್ಕೆ ಮತದಾನ ನಡೆಯಲಿದ್ದು, ಮೇ 13 ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ಹೇಳಿದೆ. 20 ಏಪ್ರಿಲ್ ನಾಮಪತ್ರ ಸಲ್ಲಿಕೆಗೆ ಕಡೆಯ ದಿನವಾಗಿರಲಿದ್ದು, ಏಪ್ರಿಲ್ 24 ನಾಮಪತ್ರ ವಾಪಸ್ ಪಡೆಯಲು ಕೊನೆಯ ದಿನವಾಗಿರಲಿದೆ..
ರಾಜ್ಯದಲ್ಲಿ ಇಂದಿನಿಂದಲೇ ಚುನಾವಣಾ ಸಂಹಿತೆ ಜಾರಿಯಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರ ಕಾರ್ಯಕ್ರಮಗಳು ರದ್ದಾಗಿವೆ
ರಾಜ್ಯದಲ್ಲಿ ಒಟ್ಟು 5.22 ಕೋಟಿ ಮತದಾರರರಿದ್ದು, 2,62,42,561 ಪುರುಷ ಮತದಾರರು, 2,59,26,319 ಮಹಿಳಾ ಮತದಾರರು ಇದ್ದಾರೆ ಎಂದು ಆಯೋಗ ತಿಳಿಸಿದೆ. ಇವರಲ್ಲಿ 9,17,241 ಮೊದಲ ಬಾರಿ ಮತದಾರರಾಗಿದ್ದು, 12,15,763 80 ವರ್ಷ ಮೇಲ್ಪಟ್ಟ ಮತದಾರರು ಇದ್ದಾರೆ. ದಿವ್ಯಾಂಗರು 5,55,073 ಮತದಾರರು, 4,699 ತೃತೀಯ ಲಿಂಗಿ ಮತದಾರರು ಇದ್ದಾರೆ ಎಂದು ಆಯೋಗ ತಿಳಿಸಿದೆ.
ರಾಜ್ಯದಲ್ಲಿ ಈ ಬಾರಿ ಒಟ್ಟು 52,282 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದ್ದು, 12 ಸಾವಿರ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಲಾಗಿದೆ.