ಈ ಬಾರಿಯ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಜೇನುಕುರುಬ, ಕಾಡುಕುರುಬ ಮತದಾರರಿಗೆ ಪ್ರತ್ಯೇಕ ಬೂತ್ ವ್ಯವಸ್ಥೆ ಮಾಡಲಾಗಿದ್ದು, ರಾಜ್ಯದಲ್ಲಿ ಒಟ್ಟು 58,282 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ನಗರ ಪ್ರದೇಶದಲ್ಲಿ 24,063 ಮತಗಟ್ಟೆಗಳ ಸ್ಥಾಪಿಸಲಾಗಿದ್ದು, ಗ್ರಾಮಾಂತರ ಪ್ರದೇಶದಲ್ಲಿ 34,219 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಮನೆಯಿಂದಲೇ ಮಾಡಬಹುದು ಮತದಾನ
80 ವರ್ಷ ಮೇಲ್ಪಟ್ಟವರಿಗೆ ಮನೆಯಿಂದ ಮತದಾನ ಮಾಡಲು ಅವಕಾಶ ನೀಡಲಾಗಿದೆ. ವಿಕಲಚೇತನರಿಗೆ ಕೂಡಾ ಮನೆಯಿಂದಲೇ ಮತದಾನ ಮಾಡುವ ಅವಕಾಶ ಕಲ್ಪಿಸಲಾಗಿದೆ.
ಮಹಿಳೆಯರಿಗೆ, ಯುವಕರಿಗೆ ವಿಶೇಷ ಮತಗಟ್ಟೆ
ಮಹಿಳಾ ಮತಗಟ್ಟೆಗಳನ್ನು ಮಹಿಳಾ ಸಿಬ್ಬಂದಿಗಳೇ ನಿರ್ವಹಿಸಲಿದ್ದು, ಇಂತಹ 1,320 ಮತಗಟ್ಟೆ ರಚಿಸಲಾಗಿದೆ. 224 ಕ್ಷೇತ್ರಗಳಲ್ಲಿ ತಲಾ ಒಂದು ಯುವ ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದೆ. ಯುವ ಮತಗಟ್ಟೆಗಳಲ್ಲಿ ಯುವ ಅಧಿಕಾರಿಗಳನ್ನೇ ನಿಯೋಜಿಸಲಾಗುವುದು ಎಂದು ಚುನಾವಣಾ ಆಯೋಗ ತಿಳಿಸಿದೆ.