ನವದೆಹಲಿ: ಕರ್ನಾಟಕ ವಿಧಾನಸಭೆ ಚುನಾವಣೆ ದಿನಾಂಕ ಇನ್ನೇನು ಪ್ರಕಟವಾಗಲಿದ್ದು ಮೇ 23ರರೊಳಗಾಗಿ ಚುನಾವಣೆ ಮುಕ್ತಾಯವಾಗಲಿದೆ ಎಂದು ಚುನಾವಣಾ ಆಯೋಗ ಹೇಳಿಗೆ.
15ನೇ ವಿಧಾನಸಭೆ ಯ ಅವಧಿ ಮೇ 24ಕ್ಕೆ ಮುಕ್ತಾಯವಾಗಲಿದೆ. ಮೇ 23ರೊಳಗೆ ಹೊಸ ಸರ್ಕಾರ ರಚನೆಯಾಗಬೇಕು. ಇಂದಿನಿಂದಲೇ ನೀತಿ ಸಂಹಿತೆ ಜಾರಿಯಾಗಲಿದ್ದು, ಯಾವುದೇ ಗೊಂದಲವಿಲ್ಲದೆ ಈ ಬಾರಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಸಕಲ ಸಿದ್ಧತೆ ಮಾಡಿಕೊಂಡಿದೆ ಎಂದು ಚುನಾವಣಾ ಆಯೋಗ ಹೇಳಿದೆ.
ರಾಜ್ಯದಲ್ಲಿ ಒಟ್ಟು 5ಕೋಟಿ 21 ಲಕ್ಷ ಮತದಾರಿದ್ದು, 2 ಕೋಟಿ 62 ಲಕ್ಷ ಪುರುಷ ಮತದಾರರು, 2 ಕೋಟಿ 59 ಲಕ್ಷ ಮಹಿಳಾ ಮತದಾರರು, 18-19 ವರ್ಷದೊಳಗಿನ ಮತದಾರರ ಸಂಖ್ಯೆ 19 ಲಕ್ಷದಷ್ಟಿದ್ದು 4,699 ತೃತೀಯಲಿಂಗಿ ಮತದಾರರಿದ್ದಾರೆ. ಮತದಾರರನ್ನು ಮತಗಟ್ಟೆಗಳತ್ತ ಬರುವಂತೆ ಮಾಡಲು ಹಲವು ವಿಶೇಷ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಆಯೋಗ ತಿಳಿಸಿದೆ.