ಪ್ರಸಕ್ತ ಆರ್ಥಿಕ ವರ್ಷದಲ್ಲಿ ಕರ್ನಾಟಕ ಉತ್ತಮ ವಿತ್ತೀಯ ಸಾಧನೆಯನ್ನು ಮಾಡಿದ್ದು, ಆರ್ಥಿಕ ಅಭಿವೃದ್ದಿ, ನೇರ ವಿದೇಶಿ ಬಂಡವಾಳ ಹೂಡಿಕೆಗಳಲ್ಲಿ ದೇಶದಲ್ಲೆ ಗುಜರಾತ್ ಅನ್ನು ಹಿಂದಿಕ್ಕಿ 2 ನೇ ಸ್ಥಾನಕ್ಕೇರಿದೆ.
ಕರ್ನಾಟಕವು 2023-24 ರಲ್ಲಿ ಹೂಡಿಕೆ ಸೇರಿದಂತೆ ಇನ್ನಿತರ ಕಾರ್ಯದಲ್ಲಿ 3 ನೇ ಸ್ಥಾನದಲ್ಲಿತ್ತು, 2024-25 ರ ಮೊದಲ ತ್ರೈಮಾಸಿಕದಲ್ಲಿ ಹೂಡಿಕೆಗಳಲ್ಲಿ ಗುಜರಾತ್ ಅನ್ನು ಹಿಂದಿಕ್ಕಿ 2 ನೇ ಸ್ಥಾನಕ್ಕೇರುವ ಮೂಲಕ ಜಾಗತಿಕವಾಗಿ ಹೂಡಿಕೆ ಸ್ನೇಹಿ ರಾಜ್ಯವಾಗಿ ಗುರುತಿಸಿಕೊಂಡಿದೆ.
ಇನ್ನು ಈ ಬಗ್ಗೆ ಸಿಎಂ ಸಿದ್ದರಾಮಯ್ಯ ತಮ್ಮ ಸೋಶಿಯಲ್ ಮೀಡಿಯಾ ಎಕ್ಸ್ ನಲ್ಲಿ ಹಂಚಿಕೊಂಡಿದ್ದು, ಕರ್ನಾಟಕವು ಕಳೆದ ವರ್ಷಗಿಂತ ಈ ವರ್ಷ ಹೆಚ್ಚು ಅಭಿವೃದ್ಧಿ ಹೊಂದಿದೆ ಎಂಬುದಕ್ಕೆ ಇದೆ ಸಾಕ್ಷಿ, ಈ ಬಾರಿ ವಿದೇಶಿ ವಿನಿಮಯದಲ್ಲಿ ಹೆಚ್ಚಿನ ಪ್ರಾಮುಖ್ಯತೆ ನೀಡಿದ್ದು, ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದು ಬರೆದಿದ್ದಾರೆ.
ಬಜೆಟ್ ಅನುದಾನ ವೆಚ್ಚ ಸಾಧನೆ:
ರಾಜ್ಯ ಅಕ್ಟೋಬರ್ ಅಂತ್ಯದ ವೇಳೆಗೆ ಬಜೆಟ್ ಅನುದಾನದ ಶೇ.46 ರಷ್ಟು ವೆಚ್ಚ ಮಾಡಿದ್ದು, ಕಳೆದ ವರ್ಷ ಇದೇ ಅವಧಿಯಲ್ಲಿ ಶೇ.42 ರಷ್ಟು ವೆಚ್ಚ ದಾಖಲಾಗಿತ್ತು. ಬಜೆಟ್ ಅಂದಾಜಿಗಿಂತ ಬಂಡವಾಳ ವೆಚ್ಚ ಸಹ ಶೇ.24.7ರಿಂದ ಶೇ.29 ಕ್ಕೆ ಏರಿಕೆಯಾಗಿದೆ.
ಮೂಲಸೌಕರ್ಯ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ :
ಪ್ರಸ್ತುತ ಹಣಕಾಸು ಸಾಲಿನ ಆರಂಭಿಕ ಏಳು ತಿಂಗಳ ಅವಧಿಯಲ್ಲಿ ಕರ್ನಾಟಕ ರಾಜ್ಯ ಗಣನೀಯ ಆರ್ಥಿಕ ಪ್ರಗತಿ ಸಾಧಿಸಿದ್ದು, ರೂ.1,03,683 ಕೋಟಿ ಆದಾಯ ಸಂಗ್ರಹ ಮಾಡಿದೆ. ಪ್ರಸ್ತುತ ಹಣಕಾಸು ವರ್ಷದಲ್ಲಿ ರೂ.1,95,525 ಕೋಟಿ ಆದಾಯ ಸಂಗ್ರಹ ಗುರಿಯನ್ನು ಹೊಂದಲಾಗಿದ್ದು, ಈಗಾಗಲೇ ಶೇ.53 ರಷ್ಟು ಗುರಿಯನ್ನು ಸಾಧಿಸಲಾಗಿದೆ.
ಏರುಗತಿಯಲ್ಲಿ ರಾಜ್ಯದ ಆರ್ಥಿಕತೆ: ಆದಾಯ ಹೆಚ್ಚಳ, ಮೂಲಸೌಕರ್ಯ ಕ್ಷೇತ್ರದಲ್ಲಿ ಹೆಚ್ಚಿನ ಹೂಡಿಕೆ
ಪ್ರಸ್ತುತ ಹಣಕಾಸು ಸಾಲಿನ ಆರಂಭಿಕ ಏಳು ತಿಂಗಳ ಅವಧಿಯಲ್ಲಿ ಕರ್ನಾಟಕ ರಾಜ್ಯ ಗಣನೀಯ ಆರ್ಥಿಕ ಪ್ರಗತಿ ಸಾಧಿಸಿದ್ದು, ರೂ.1,03,683 ಕೋಟಿ ಆದಾಯ ಸಂಗ್ರಹ ಮಾಡಿದೆ.
ಪ್ರಸ್ತುತ ಹಣಕಾಸು ವರ್ಷದಲ್ಲಿ ರೂ.1,95,525 ಕೋಟಿ ಆದಾಯ ಸಂಗ್ರಹ ಗುರಿಯನ್ನು…
— CM of Karnataka (@CMofKarnataka) October 30, 2024
ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಎರಡನೇ ಸ್ಥಾನ:
ಕರ್ನಾಟಕ ಸರ್ಕಾರದ ಉದ್ಯಮ ಸ್ನೇಹಿ ನೀತಿಗಳು ಹಾಗೂ ಉತ್ತಮ ಆರ್ಥಿಕ ನೀತಿಗಳಿಂದಾಗಿ ವಿದೇಶಿ ಬಂಡವಾಳ ಹೂಡಿಕೆಯಲ್ಲೂ ಹೆಚ್ಚಿನ ಪ್ರಗತಿ ಸಾಧ್ಯವಾಗಿದೆ. 2024-25 ರ ಪ್ರಥಮ ತ್ರೈಮಾಸಿಕದಲ್ಲಿ ರಾಜ್ಯ 2.2 ಬಿಲಿಯನ್ ರೂ. ನೇರ ವಿದೇಶಿ ಬಂಡವಾಳ ಆಕರ್ಷಿಸಿದ್ದು, ರಾಷ್ಟ್ರ ಮಟ್ಟದಲ್ಲಿ ಗುಜರಾತ್ ರಾಜ್ಯವನ್ನು ಹಿಂದಿಕ್ಕಿ ಎರಡನೇ ಸ್ಥಾನಕ್ಕೆ ಏರಿದೆ.
ವಿದೇಶಿ ಬಂಡವಾಳ ಹೂಡಿಕೆಯಲ್ಲಿ ಎರಡನೇ ಸ್ಥಾನ:
ಕರ್ನಾಟಕ ಸರ್ಕಾರದ ಉದ್ಯಮ ಸ್ನೇಹಿ ನೀತಿಗಳು ಹಾಗೂ ಉತ್ತಮ ಆರ್ಥಿಕ ನೀತಿಗಳಿಂದಾಗಿ ವಿದೇಶಿ ಬಂಡವಾಳ ಹೂಡಿಕೆಯಲ್ಲೂ ಹೆಚ್ಚಿನ ಪ್ರಗತಿ ಸಾಧ್ಯವಾಗಿದೆ. 2024-25 ರ ಪ್ರಥಮ ತ್ರೈಮಾಸಿಕದಲ್ಲಿ ರಾಜ್ಯ 2.2 ಬಿಲಿಯನ್ ರೂ. ನೇರ ವಿದೇಶಿ ಬಂಡವಾಳ ಆಕರ್ಷಿಸಿದ್ದು, ರಾಷ್ಟ್ರ ಮಟ್ಟದಲ್ಲಿ ಗುಜರಾತ್…— CM of Karnataka (@CMofKarnataka) October 30, 2024
ಧೀರ್ಘಕಾಲೀನ ಅಭಿವೃದ್ಧಿಗೆ ಮೂಲಸೌಕರ್ಯಗಳ ಮೇಲೆ ಹೂಡಿಕೆ:
ಬಂಡವಾಳ ಹೂಡಿಕೆಗಳ ಮೇಲೆ ಹೆಚ್ಚಿನ ಒತ್ತು ನೀಡುವ ಮೂಲಕ ರಾಜ್ಯ ಜಿಎಸ್‌ಡಿಪಿ ಅಭಿವೃದ್ದಿ ದರವನ್ನು ಶೇ.14 ರಷ್ಟು ಸಾಧಿಸುವ ಗುರಿಯನ್ನು ಹೊಂದಿದೆ. ಪ್ರಮುಖ ಯೋಜನೆಗಳಿಗೆ ರೂ.16,750 ಕೋಟಿ ಸಹಾಯ ಪಡೆಯುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಜತೆ ಮಾತುಕತೆ ನಡೆಸುತ್ತಿದೆ.
ಧೀರ್ಘಕಾಲೀನ ಅಭಿವೃದ್ಧಿಗೆ ಮೂಲಸೌಕರ್ಯಗಳ ಮೇಲೆ ಹೂಡಿಕೆ:
ಬಂಡವಾಳ ಹೂಡಿಕೆಗಳ ಮೇಲೆ ಹೆಚ್ಚಿನ ಒತ್ತು ನೀಡುವ ಮೂಲಕ ರಾಜ್ಯ ಜಿಎಸ್‌ಡಿಪಿ ಅಭಿವೃದ್ದಿ ದರವನ್ನು ಶೇ.14 ರಷ್ಟು ಸಾಧಿಸುವ ಗುರಿಯನ್ನು ಹೊಂದಿದೆ. ಪ್ರಮುಖ ಯೋಜನೆಗಳಿಗೆ ರೂ.16,750 ಕೋಟಿ ಸಹಾಯ ಪಡೆಯುವ ನಿಟ್ಟಿನಲ್ಲಿ ವಿಶ್ವಬ್ಯಾಂಕ್ ಮತ್ತು ಏಷ್ಯನ್ ಡೆವಲಪ್‌ಮೆಂಟ್ ಬ್ಯಾಂಕ್ ಜತೆ…— CM of Karnataka (@CMofKarnataka) October 30, 2024
ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ :
ಪ್ರಸ್ತುತ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಜೆಟ್‌ನಲ್ಲಿ ಘೋಷಿಸಿರುವ ರೂ.52,009 ಕೋಟಿ ಪೈಕಿ ಈಗಾಗಲೇ ರೂ.24,235 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಫಲಾನುಭವಿಗಳಿಗೆ ನಿಗದಿತ ಅವಧಿಯ ಒಳಗಾಗಿ ಯೋಜನೆಗಳ ಲಾಭ ತಲುಪುವಂತಾಗಲು ಇ ಆಡಳಿತ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಲಾಗುತ್ತಿದೆ.
ಕಲ್ಯಾಣ ಕಾರ್ಯಕ್ರಮಗಳಿಗೆ ಅನುದಾನ:
ಪ್ರಸ್ತುತ ಸಾಲಿನಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಬಜೆಟ್‌ನಲ್ಲಿ ಘೋಷಿಸಿರುವ ರೂ.52,009 ಕೋಟಿ ಪೈಕಿ ಈಗಾಗಲೇ ರೂ.24,235 ಕೋಟಿ ಅನುದಾನ ಬಿಡುಗಡೆ ಮಾಡಿದೆ. ಫಲಾನುಭವಿಗಳಿಗೆ ನಿಗದಿತ ಅವಧಿಯ ಒಳಗಾಗಿ ಯೋಜನೆಗಳ ಲಾಭ ತಲುಪುವಂತಾಗಲು ಇ ಆಡಳಿತ ವ್ಯವಸ್ಥೆಯನ್ನು ಸಮರ್ಪಕವಾಗಿ ಬಳಸಲಾಗುತ್ತಿದೆ.…— CM of Karnataka (@CMofKarnataka) October 30, 2024
ಕಲ್ಯಾಣ ಕಾರ್ಯಕ್ರಮಗಳು ಮತ್ತು ಅಭಿವೃದ್ಧಿ ನಡುವೆ ಸಮತೋಲನ:
ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಬಂಡವಾಳ ಹೂಡಿಕೆಗಳ ನಡುವೆ ಸಮತೋಲನ ಸಾಧಿಸುವ ಮೂಲಕ ಕರ್ನಾಟಕ ರಾಜ್ಯ ಸುಸ್ಥಿರ ಅಭಿವೃದ್ಧಿಯ ಹೊಸ ಮಾದರಿಯನ್ನು ಪರಿಚಯಿಸಿದೆ. ಮೂಲಸೌಕರ್ಯ ಅಭಿವೃದ್ದಿ, ಆರ್ಥಿಕ ಸುಧಾರಣೆಗಳು, ಎಲ್ಲರನ್ನು ಒಳಗೊಂಡ ಅಭಿವೃದ್ಧಿಯನ್ನು ಸಾಧಿಸುವ ಗುರಿಯನ್ನು ಹೊಂದುವ ಮೂಲಕ ರಾಜ್ಯ ದೂರಗಾಮಿ ಆರ್ಥಿಕ ಅಭಿವೃದ್ಧಿ ಮತ್ತು ಹಣಕಾಸು ನಿರ್ವಹಣೆಯಲ್ಲಿ ಮುಂಚೂಣಿಗೆ ಬರಲು ಸಾಧ್ಯವಾಗಿದೆ.