ಬೆಂಗಳೂರು: ತ್ವರಿತ ಗತಿಯಲ್ಲಿ ನ್ಯಾಯ ಒದಗಿಸುವ ರಾಜ್ಯಗಳ ಪೈಕಿ ಕರ್ನಾಟಕ ಪೊಲೀಸರು ದೇಶದಲ್ಲೇ ಮೊದಲ ಸ್ಥಾನ ಪಡೆದಿದ್ದಾರೆ. ಪ್ರತಿಷ್ಠಿತ ಟಾಟಾ ಸಂಸ್ಥೆ ನಡೆಸಿದ್ದ ಸಮೀಕ್ಷೆಯಲ್ಲಿ ಈ ಅಂಶ ಬಹಿರಂಗವಾಗಿದೆ. ಕರ್ನಾಟಕ ಪೊಲೀಸರು ಹತ್ತು ಅಂಗಗಳಿಗೆ 6.38 ಅಂಕ ಪಡೆದು ನಂಬರ್ ಒನ್ ಸ್ಥಾನ ಗಳಿಸಿದ್ದಾರೆ.
ನೊಂದವರಿಗೆ ನ್ಯಾಯ ಕೊಡಿಸುವುದರಲ್ಲಿ, ಅಪರಾಧ ಪ್ರಕರಣಗಳನ್ನು ಬೇಧಿಸುವುದರಲ್ಲಿ ಹಾಗೂ ತ್ವರಿತಗರಿಯಲ್ಲಿ ಪ್ರಕರಣಗಳನ್ನು ವಿಲೇವಾರಿ ಮಾಡುವುದರಲ್ಲಿ ರಾಜ್ಯದ ಪೊಲೀಸರು ಅತ್ಯಂತ ವೇಗವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆಂದು ಸಮೀಕ್ಷೆ ಹೇಳಿದೆ. ಎರಡನೇ ಸ್ಥಾನ ಛತ್ತೀಸ್‍ಘಡ ಪಡೆದಿದ್ದರೆ, ಒಡಿಶಾ, ಆಂಧ್ರಪ್ರದೇಶ ಹಾಗೂ ತಮಿಳುನಾಡಿನ ಪೊಲೀಸರಿಗೆ ಕ್ರಮವಾಗಿ ಮೂರು, ನಾಲ್ಕು ಮತ್ತು ಐದನೇ ಸ್ಥಾನಗಳು ಲಭ್ಯವಾಗಿದೆ.