ಚುನಾವಣೆ ದಿನಾಂಕ ಘೋಷಣೆಯಾಗಿದ್ರು ಬಿಜೆಪಿ ಅಭ್ಯರ್ಥಿಗಳ ಆಯ್ಕೆ ಫೈನಲ್ ಆಗಿಲ್ಲ. ಈಗಾಗಲೇ ಅಮಿತ್ ಶಾ ಬಂದು ಒಂದು ಸುತ್ತಿನ ಕೋರ್ ಕಮಿಟಿ ನಡೆಸಿ ಹೋಗಿದ್ರೂ ಒಂದು ತಾರ್ಕಿಕ ಅಂತ್ಯಕ್ಕೆ ಬರಲು ಬಿಜೆಪಿ ಸಾಧ್ಯವಾಗಿಲ್ಲ ಎನ್ನಲಾಗಿದೆ.
ಚುನಾವಣಾ ಸಮೀಕ್ಷೆಯಲ್ಲಿ ಪಕ್ಷಕ್ಕೆ ಸೋಲು ಹಾಗೂ ಹಲವು ಬಿಜೆಪಿ ಶಾಸಕರು ಕಾಂಗ್ರೆಸ್ ಸಂಪರ್ಕದಲ್ಲಿರುವ ಹಿನ್ನೆಲೆಯಲ್ಲಿ ಪಕ್ಷದೊಳಗೆ ಭಿನ್ನಮತ ಬರದಂತೆ ಟಿಕೆಟ್ ಹಂಚಲು ಪಕ್ಷ ಯೋಜಿಸಿದ್ದು, ಟಿಕೆಟ್ ಸಿಗದ ಆಕಾಂಕ್ಷಿಗಳಿಗೆ ಇತರ ಹುದ್ದೆ ನೀಡಿ ಸಮಾಧಾನ ಪಡಿಸಲಾಗುತ್ತಿದೆ.
ಇಂದು ಬೆಂಗಳೂರಿನಲ್ಲಿ ಮತ್ತೆ ಬಿಜೆಪಿ ಕೋರ್ ಕಮಿಟಿ ಮೀಟಿಂಗ್ ನಡೆಸಲಾಗುತ್ತಿದೆ. ಬೆಂಗಳೂರು ಉತ್ತರ ತಾಲೂಕು ಆಲೂರಿನ ಖಾಸಗಿ ಹೋಟೆಲ್ನಲ್ಲಿ ಬಿಜೆಪಿ ಕೋರ್ ಕಮಿಟಿ ಮೀಟಿಂಗ್ ನಡೆಯಲಿದ್ದು ಬಿಜೆಪಿ ನಾಯಕರು, ಮುಖಂಡರು ಹೋಟೆಲ್ನತ್ತ ಬರುತ್ತಿದ್ದಾರೆ.
ಇಂದಿನ ಸಭೆಯಲ್ಲಿ ಬಹುತೇಕ ಮಹತ್ವದ ನಿರ್ಧಾರಗಳನ್ನ ಕೈಗೊಳ್ಳಲಾಗುತ್ತೆ. ನಿನ್ನೆ ನಡೆದ ಪಕ್ಷದ ಆಂತರಿಕ ಚುನಾವಣೆಯ ಬಗ್ಗೆ ಚರ್ಚೆ ನಡೆಯಲಿದೆ. ಕ್ಷೇತ್ರದ ಅಭ್ಯರ್ಥಿಗಳ ಪಟ್ಟಿ ಬಗ್ಗೆ ಚರ್ಚೆ ನಡೆಯಲಿದೆ. ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಯಡಿಯೂರಪ್ಪ, ನಳಿನ್ ಕುಮಾರ್ ಕಟೀಲ್ ಸೇರಿದಂತೆ ಹಲವು ನಾಯಕರು ಕೋರ್ ಕಮಿಟಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ.