ಬಿಸಿಲಿನಿಂದ ಬಸವಳಿದಿರುವ ಜನರಿಗೆ ಮಳೆರಾಯ ತಂಪೆರೆಯುವ ಸಾಧ್ಯತೆ ಇದೆ. ಮುಂದಿನ 24 ಗಂಟೆಗಳಲ್ಲಿ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು, ದಾವಣಗೆರೆ, ಶಿವಮೊಗ್ಗ ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ.
ಕರಾವಳಿಯ ಎಲ್ಲಾ ಜಿಲ್ಲೆಗಳಲ್ಲಿ ಹಾಗೂ ಹಾಸನ, ಕೊಡಗು, ಶಿವಮೊಗ್ಗ, ದಾವಣಗೆರೆಯಲ್ಲಿ ಮಳೆಯಾಗಲಿದ್ದು, ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನ ಉಳಿದೆಡೆ ಒಣಹವೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.
ಇಂದು ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣವಿರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.
ದೇಶದಲ್ಲಿ ಈ ವರ್ಷ ವಾಡಿಕೆಗಿಂತ ಕಡಿಮೆ ಮಳೆಯಾಗಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ಹೇಳಿದೆ. ಮುಂಬರುವ ಮಾನ್ಸೂನ್ ನಲ್ಲಿ ಸಾಮಾನ್ಯ ವಾಡಿಕೆ ಮಳೆಗಿಂತ ಕಡಿಮೆ ಮಳೆಯಾಗಲಿದ್ದು, ಶೇ. 94 ರಷ್ಟು ಮಳೆಯಾಗಲಿದೆ ಎಂದು ಹೇಳಿದೆ. ಜೂನ್ ನಿಂದ ಸೆಪ್ಟೆಂಬರ್ ವರೆಗೆ ನಾಲ್ಕು ತಿಂಗಳ ದೀರ್ಘಾವಧಿಯಲ್ಲಿ ದೀರ್ಘಾವಧಿಯ ಸರಾಸರಿ 868.6 ಮಿಮೀ ಮಳೆಯಾಗಲಿದೆ ಎಂದು ಖಾಸಗಿ ಹವಾಮಾನ ಮುನ್ಸೂಚನಾ ಸಂಸ್ಥೆ ಸ್ಕೈಮೆಟ್ ಸೋಮವಾರ ಹೇಳಿದೆ.