ಬೆಂಗಳೂರು: ನಾನು ನನ್ನ ಮನೆಯಲ್ಲಿ ಫಿಸಿಯೋಥೆರಪಿ ಚಿಕಿತ್ಸೆ ತೆಗೆದುಕೊಳ್ಳುತ್ತಿರುವ ಸಮಯದಲ್ಲಿ ತೆಗೆದ ಫೋಟೋಗಳನ್ನು ಹರಿಬಿಡುವ ಮೂಲಕ ಕಾಂಗ್ರೆಸ್ ನವರು ತೇಜೋವಧೆಗೆ ಪ್ರಯತ್ನಿಸುತ್ತಿದ್ದಾರೆ ಎಂದು ಬಿಜೆಪಿ ಮಾಜಿ ಸಚಿವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಆರೋಪಿಸಿದ್ದಾರೆ. ಸೋಷಿಯಲ್ ಮೀಡಿಯಾಗಳಲ್ಲಿ ವೈರಲ್ ಆಗುತ್ತಿರುವ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಅವರ ನಗ್ನ ಪೋಟೋಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್ ಚುನಾವಣೆ ಗೆಲ್ಲಲು ವಾಮಮಾರ್ಗ ಬಳಸುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಆರೋಗ್ಯ ಸಮಸ್ಯೆ ಹೊಂದಿರುವ ನಾನು ಪ್ರತಿದಿನ ಫಿಸಿಯೋಥೆರಪಿ ಮಸಾಜ್ ಚಿಕಿತ್ಸೆ ಪಡೆಯುತ್ತಿದ್ದೇನೆ. ಇದನ್ನು ಯಾರೋ ಕಿಡಿಗೇಡಿಗಳು ಫೋಟೋ ತೆಗೆದು ಹೊರಬಿಟ್ಟಿದ್ದಾರೆ. ಅವರ ಪ್ರಯತ್ನ ಸಫಲವಾಗಿಲ್ಲ ಎಂದರು. ಜೊತೆಗೆ ಈ ಬಗ್ಗೆ ಕಾನೂನು ಹೋರಾಟವನ್ನು ಸಹ ನಡೆಸುವುದಾಗಿ ಕಟ್ಟಾ ಸುಬ್ರಹ್ಮಣ್ಯ ನಾಯ್ಡು ಹೇಳಿದ್ದಾರೆ.