Saturday, May 16, 2026
Homeಟಾಪ್ ನ್ಯೂಸ್KEA: ಪಿಯುಸಿ ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಎಳೆದ ಕೆಇಎ, ಜಾಸ್ತಿ ಮಾರ್ಕ್‌ ಬಂದಿರೋ ಪರೀಕ್ಷೆ ಅಂಕಗಳೇ...

KEA: ಪಿಯುಸಿ ವಿದ್ಯಾರ್ಥಿಗಳ ಗೊಂದಲಕ್ಕೆ ತೆರೆ ಎಳೆದ ಕೆಇಎ, ಜಾಸ್ತಿ ಮಾರ್ಕ್‌ ಬಂದಿರೋ ಪರೀಕ್ಷೆ ಅಂಕಗಳೇ ಸಿಇಟಿಗೆ ಸ್ವೀಕಾರ

ಬೆಂಗಳೂರು: ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಲ್ಲಿ ಸಿಇಟಿ (CET) ಫಲಿತಾಂಶಕ್ಕೆ ಸಂಬಂಧಿಸಿದಂತೆ ಇದ್ದ ಗೊಂದಲಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ತೆರೆ ಎಳೆದಿದೆ. ಪರೀಕ್ಷೆ-1 ಮತ್ತು ಪರೀಕ್ಷೆ-2ರಲ್ಲಿ ವಿದ್ಯಾರ್ಥಿಗಳು ಪಡೆಯುವ ಅಂಕಗಳಲ್ಲಿ ಯಾವುದು ಹೆಚ್ಚಿರುತ್ತದೋ, ಆ ಅಂಕಗಳನ್ನೇ ಸಿಇಟಿ ರ‍್ಯಾಂಕಿಂಗ್‌ಗೆ ಪರಿಗಣಿಸಲಾಗುವುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್. ಪ್ರಸನ್ನ ಸ್ಪಷ್ಟಪಡಿಸಿದ್ದಾರೆ.

ವದಂತಿಗಳಿಗೆ ಕಿವಿಗೊಡಬೇಡಿ
ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಎರಡನೇ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಅಂಕಗಳನ್ನು ಪರಿಗಣಿಸುವುದಿಲ್ಲ ಎಂಬ ವದಂತಿಗಳು ಹರಡಿದ್ದವು. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಚ್. ಪ್ರಸನ್ನ ಅವರು, ವಿದ್ಯಾರ್ಥಿಗಳು ಆತಂಕ ಪಡುವ ಅಗತ್ಯವಿಲ್ಲ. ಕಳೆದ ವರ್ಷದಂತೆಯೇ ಈ ಬಾರಿಯೂ ಎರಡು ಪರೀಕ್ಷೆಗಳಲ್ಲಿ ಯಾವುದರಲ್ಲಿ ಹೆಚ್ಚಿನ ಅಂಕ ಬಂದಿರುತ್ತದೆಯೋ ಅದನ್ನೇ ರ‍್ಯಾಂಕಿಂಗ್‌ಗೆ ಬಳಸಿಕೊಳ್ಳಲಾಗುವುದು. ಎರಡೂ ಪರೀಕ್ಷೆಗಳ ಫಲಿತಾಂಶ ಬಂದ ನಂತರವೇ ಸಿಇಟಿ ಫಲಿತಾಂಶ ಪ್ರಕಟವಾಗುವುದರಿಂದ ಅಂಕ ಪರಿಗಣನೆಯಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ತಿಳಿಸಿದ್ದಾರೆ.

ನಿಯಮ ಯಾರಿಗೆ ಅನ್ವಯ?
ಈ ಎರಡು ಪರೀಕ್ಷೆಗಳ ಅತ್ಯಧಿಕ ಅಂಕ ಪರಿಗಣಿಸುವ ನಿಯಮವು ಕರ್ನಾಟಕ ರಾಜ್ಯ ಪಠ್ಯಕ್ರಮದ ಪಿಯುಸಿ ಅಭ್ಯರ್ಥಿಗಳಿಗೆ ಮಾತ್ರ ಅನ್ವಯವಾಗುತ್ತದೆ. ಆದರೆ ಸಿಬಿಎಸ್̧ಇ  ಐಸಿಎಸ್ಇ ಸೇರಿದಂತೆ ಕೇಂದ್ರ ಪಠ್ಯಕ್ರಮ ಹಾಗೂ ಇತರ ರಾಜ್ಯಗಳ ಬೋರ್ಡ್ ಪರೀಕ್ಷೆ ಬರೆಯುವ ಅಭ್ಯರ್ಥಿಗಳಿಗೆ ಈ ನಿಯಮ ಅನ್ವಯಿಸುವುದಿಲ್ಲ ಎಂದು ಅವರು ವಿವರಿಸಿದ್ದಾರೆ.

ಹೀಗಾಗಿ, ರಾಜ್ಯ ಪಠ್ಯಕ್ರಮದ ವಿದ್ಯಾರ್ಥಿಗಳು ಯಾವುದೇ ಗೊಂದಲವಿಲ್ಲದೆ ಎರಡನೇ ಪರೀಕ್ಷೆಯ ಮೂಲಕ ತಮ್ಮ ಅಂಕಗಳನ್ನು ಉತ್ತಮಪಡಿಸಿಕೊಳ್ಳಲು ಅವಕಾಶವಿದೆ.

625ರ ಬದಲು 525 ಅಂಕಗಳಿಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ, ಶಿಕ್ಷಣ ಇಲಾಖೆ ಕರಡು ಅಧಿಸೂಚನೆ

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆಯು ಎಸ್‌ಎಸ್‌ಎಲ್‌ಸಿ (SSLC) ಪರೀಕ್ಷಾ ಪದ್ಧತಿಯಲ್ಲಿ ಮಹತ್ತರ ಬದಲಾವಣೆ ತರಲು ಮುಂದಾಗಿದೆ. ಇನ್ಮುಂದೆ ಎಸ್‌ಎಸ್‌ಎಲ್‌ಸಿ ಒಟ್ಟು ಅಂಕಗಳನ್ನು 625 ರಿಂದ 525ಕ್ಕೆ ಇಳಿಸಲು ನಿರ್ಧರಿಸಲಾಗಿದ್ದು, ಈ ಸಂಬಂಧ ಕರಡು ಅಧಿಸೂಚನೆಯನ್ನು ಹೊರಡಿಸಲಾಗಿದೆ.

ಆಧಿಸೂಚನೆಯಲ್ಲಿ ಏನಿದೆ?
ಅಧಿಸೂಚನೆಯಲ್ಲಿ 525 ಅಂಕಗಳ ಅನುಷ್ಠಾನ ಹೇಗೆ ನಡೆಯಲಿದೆ ಎಂಬುದನ್ನು ತಿಳಿಸಲಾಗಿದೆ. ಅದರಂತೆ ತೃತೀಯ ಭಾಷೆ ವಿಷಯದಲ್ಲಿ ಅಂಕಗಳ ಬದಲಾಗಿ ಗ್ರೇಡ್ ಸಿಸ್ಟಮ್ ವಿವರಿಸಲಾಗಿದೆ. ಈ ಮೊದಲು 625 ಅಂಕಗಳಿಗೆ ಪರೀಕ್ಷೆ ನಡೆಸಲಾಗುತ್ತಿತ್ತು. ಈಗ ತೃತೀಯ ಭಾಷೆಗೆ ನೀಡಲಾಗುತ್ತಿದ್ದ 100 ಅಂಕ ತೆಗೆಯಲಾಗಿದೆ. ಹಾಗಾಗಿ ಐದು ಭಾಷೆಯ ವಿಷಯಗಳಿಗೆ 525 ಅಂಕಗಳಿಗೆ ಫಲಿತಾಂಶ ನೀಡಲಾಗುತ್ತದೆ. ವಿದ್ಯಾರ್ಥಿಗಳು ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಒಟ್ಟು 525 ಅಂಕಗಳಲ್ಲಿ ಕನಿಷ್ಠ 173 ಅಂಕಗಳನ್ನು ಗಳಿಸಬೇಕು. ಅಂದರೆ ಶೇ.33ರಷ್ಟು ಅಂಕ ಗಳಿಸಬೇಕು. ಅಲ್ಲದೇ ಪ್ರತಿ ವಿಷಯದಲ್ಲಿ ಕನಿಷ್ಠ ಶೇ.30 ರಷ್ಟು ಅಂಕಗಳನ್ನು ಪಡೆಯುವುದು ಕಡ್ಡಾಯವಾಗಲಿದೆ.

ಇದನ್ನೂ ಓದಿ :  ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಎಕ್ಸಾಂ ಬೋರ್ಡ್ ಫೇಲ್ – ನೂರಕ್ಕೆ 111 ಅಂಕ, 600 ಕ್ಕೆ 683 ಅಂಕ!

ಹೆಚ್ಚಿನ ಸುದ್ದಿ

Change Language »
error: Content is protected !!