ನವದೆಹಲಿ: ಆಂಧ್ರಪ್ರದೇಶದ ಮಾಜಿ ಮುಖ್ಯಮಂತ್ರಿ ಕಿರಣ್ ಕುಮಾರ್ ರೆಡ್ಡಿ ಶುಕ್ರವಾರ ಬಿಜೆಪಿಗೆ ಸೇರ್ಪಡೆ ಆಗುವ ಮೂಲಕ ಕಾಂಗ್ರೆಸ್ ಗೆ ಶಾಕ್ ನೀಡಿದ್ದಾರೆ.
ಈ ಮೂಲಕ ಇತ್ತೀಚಿನ ದಿನಗಳಲ್ಲಿ ಕಾಂಗ್ರೆಸ್ ತೊರೆದು ಬಿಜೆಪಿ ಸೇರುತ್ತಿರುವ ದಕ್ಷಿಣ ಭಾರತದ ಎರಡನೇ ರಾಜಕಾರಣಿಯಾಗಿದ್ದಾರೆ.
ನಿನ್ನೆಯಷ್ಟೇ ಎಕೆ ಆ್ಯಂಟನಿ ಅವರ ಪುತ್ರ ಅನಿಲ್ ಆಂಟನಿ ಬಿಜೆಪಿಗೆ ಸೇರ್ಪಡೆಯಾಗಿದ್ದರು. 2014ರಲ್ಲಿ ತೆಲಂಗಾಣ ರಚನೆಗೆ ಮುನ್ನ ಅವಿಭಜಿತ ಆಂಧ್ರಪ್ರದೇಶ ರಾಜ್ಯದ ಮುಖ್ಯಮಂತ್ರಿ ಆಗಿದ್ದವರು ಕಿರಣ್ ರೆಡ್ಡಿ.
ಪಕ್ಷದ ನಾಯಕತ್ವದ ವಿಚಾರದಲ್ಲಿ ಅಸಮಾಧಾನಗೊಂಡು 2023ರ ಮಾರ್ಚಿನಲ್ಲಿ ಅವರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿದ್ದರು