ಕೋಲಾರದ (Kolar) ಮುಳಬಾಗಿಲು ತಾಲೂಕು ಬಾಳಸಂದ್ರ ಮೊರಾರ್ಜಿ ವಸತಿ ಶಾಲೆಯಲ್ಲಿ (Morarji Desai School) ಹೃದಯವಿದ್ರಾವಕ ಘಟನೆಯೊಂದು ನಡೆದಿದ್ದು, ಹಾಸ್ಟೆಲ್ ನಲ್ಲಿ ದೆವ್ವ ಇದೆ ಎಂದು ಹೇಳಿದ್ದಕ್ಕೆ ಬಾಲಕನೋರ್ವನಿಗೆ ಹಿಗ್ಗಾಮುಗ್ಗಾ ಥಳಿಸಿದ ಘಟನೆ ನಡೆದಿದೆ.
ಮೊರಾರ್ಜಿ ವಸತಿ ಶಾಲೆಯಲ್ಲಿ 6ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಅನಂತಪುರ ಗ್ರಾಮದ ವಿದ್ಯಾರ್ಥಿಯೋರ್ವ ತನ್ನ ಸ್ನೇಹಿತರ ಬಳಿ ತನ್ನ ಮೇಲೆ ದೆವ್ವ ಇದೆ ಎಂದು ಹೆದರಿಸಿದ್ದಾನೆ. ಈ ಬಗ್ಗೆ ವಿದ್ಯಾರ್ಥಿಗಳು ಹೋಗಿ ಹಾಸ್ಟೆಲ್ ನ ವಾರ್ಡನ್ ಗೆ ದೂರು ನೀಡಿದ್ದಾರೆ.
ಇದರಿಂದ ಸಿಟ್ಟಾದ ಮುರಾರ್ಜಿ ದೇಸಾಯಿ ಹಾಸ್ಟೆಲ್ ನ ವಾರ್ಡನ್ ಬಾಲಕನನ್ನು ಕರೆಸಿಕೊಂಡು ಬೆಲ್ಟ್, ಕೋಲು, ಕೈಯಿಂದ ಹಿಗ್ಗಾಮುಗ್ಗಾ ಥಳಿಸಿದ್ದಾನೆ.. ತಪ್ಪಾಯ್ತು ಸರ್ ಎಂದು ಬೇಡಿಕೊಂಡರು ಕೂಡ ಬಿಡದೆ ಬಾಸುಂಡೆ ಬರುವ ರೀತಿ ಹಲ್ಲೆ ಮಾಡಿದ್ದಾನೆ.
ಇನ್ನು ಕಳೆದ ಕೆಲ ತಿಂಗಳ ಹಿಂದೆಯಷ್ಟೇ ಬಾಲಕ ತನ್ನ ತಂದೆಯನ್ನು ಕಳೆದುಕೊಂಡಿದ್ದ.. ಇದೀಗ ಆತನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿರುವುದನ್ನು ಖಂಡಿಸಿ ಬಾಲಕನ ತಾಯಿ ಪೊಲೀಸರಿಗೆ ದೂರು ನೀಡಿದ್ದು, ವಾರ್ಡನ್ ನನ್ನು ಅಮಾನತು ಮಾಡುವಂತೆ ಆಗ್ರಹಿಸಿದ್ದಾರೆ.
ಇದನ್ನು ಓದಿ : ಮಿನಿಟಿಪ್ಪರ್ ಗೆ ಕಾರು ಡಿಕ್ಕಿ – ನವ ವಿವಾಹಿತ ಸ್ಥಳದಲ್ಲಿಯೇ ಸಾವು!
ನಗರದ ಪ್ರತಿಷ್ಠಿತ ಶಾಲೆಯೊಂದಕ್ಕೆ ಕಿಡಿಗೇಡಿಗಳು ಬಾಂಬ್ ಬೆದರಿಕೆ ಒಡ್ಡಿರುವ ಘಟನೆ ಮಂಗಳವಾರ ನಡೆದಿದೆ. ವರ್ತೂರು ಸಮೀಪದಲ್ಲಿರುವ ಕ್ರೈಸಾಲಿಸ್ ಶಾಲೆಗೆ ಬಾಂಬ್ ಬೆದರಿಕೆ ಹಾಕಲಾಗಿದ್ದು, ಇ-ಮೇಲ್ ಮೂಲಕ ಬೆದರಿಕೆ ಪತ್ರ ರವಾನಿಸಲಾಗಿದೆ.
ಶಾಲೆಯ ಆಡಳಿತ ಮಂಡಳಿ ಮುಂಜಾಗರೂಕತಾ ಕ್ರಮವಾಗಿ ಮಕ್ಕಳಿಗೆ ರಜೆ ನೀಡಿ ಮನೆಗೆ ಕಳುಹಿಸಿದ್ದಾರೆ. ವರ್ತೂರು ಠಾಣೆಯ ಪೊಲೀಸರು ಸುದ್ದಿ ತಿಳಿದ ಕೂಡಲೇ ಬಾಂಬ್ ನಿಷ್ಕ್ರಿಯ ದಳ, ಶ್ವಾನದಳದೊಡನೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ. ಮೇಲ್ನೋಟಕ್ಕೆ ಇದೊಂದು ಹುಸಿ ಬಾಂಬ್ ಬೆದರಿಕೆ ಎಂದು ತಿಳಿದುಬಂದಿದೆ.
ಪ್ರಕರಣ ದಾಖಲಿಸಿಕೊಂಡಿರುವ ವರ್ತೂರು ಠಾಣೆಯ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಇತ್ತೀಚಿಗೆ ಬಾಂಬ್ ಬೆದರಿಕೆ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದ್ದು ದೆಹಲಿ, ಚೆನ್ನೈ ಮತ್ತು ಮುಂಬೈನಲ್ಲಿಯೂ ಇದೇ ರೀತಿ ಪ್ರಕರಣಗಳು ಕಂಡು ಬರುತ್ತಿವೆ.